SUDDIKSHANA KANNADA NEWS/ DAVANAGERE/ DATE:22-01-2025
ದಾವಣಗೆರೆ: ರಾಜ್ಯ ಬಿಜೆಪಿ ಘಟಕದಲ್ಲಿ ಅಧ್ಯಕ್ಷರ ನೇಮಕ ವಿಚಾರ ಧಗಧಗಿಸುವಂತೆ ಮಾಡಿದೆ. ಈ ನಡುವೆ ದಾವಣಗೆರೆಯಲ್ಲಿ ಮಾತನಾಡಿದ ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ
ಸ್ವಾಮೀಜಿ ಅವರು ಬಸನಗೌಡ ಪಾಟೀಲ್ ಯತ್ನಾಳ್ ಹೆಸರದೇ ಪಂಚಮಸಾಲಿ ಸಮಾಜದ ನಾಯಕರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ನಾಯಕರಿಗೆ ಬಿಜೆಪಿ ಪಕ್ಷದ ಉನ್ನತ ಹುದ್ದೆಗಳನ್ನು ನೀಡಬೇಕು. ಆಗ ಮುಂದಿನ ದಿನಗಳಲ್ಲಿ ಬಿಜೆಪಿ ಒಳ್ಳೆಯದಾಗಲಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮಾಜದವರಿಗೆ ಸಚಿವ ಸ್ಥಾನ ಕೊಡಲಾಗಿತ್ತು. ಇದಕ್ಕೆ ಸಮುದಾಯವು ಕೃತಜ್ಞವಾಗಿದೆ. ಆದ್ರೆ ಪಕ್ಷದ ಉನ್ನತ ಸ್ಥಾನಗಳನ್ನು ಸಮುದಾಯದ ನಾಯಕರಿಗೆ ನೀಡಿಲ್ಲ. ಕೇವಲ
ಪಂಚಮಸಾಲಿ ಸಮಾಜವನ್ನು ಕೇವಲ ಮತ ಬ್ಯಾಂಕ್ ಅನ್ನಾಗಿ ಮಾಡಿಕೊಳ್ಳಲಾಗಿದೆ. ಇದು ಬೇಸರದ ಸಂಗತಿ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆಯಲ್ವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಯತ್ನಾಳ್ ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ಬೆಂಬಲ ಸೂಚಿಸಿದರು.