SUDDIKSHANA KANNADA NEWS/ DAVANAGERE/ DATE:04-04-2024
ದಾವಣಗೆರೆ: ಅತ್ಯಾಚಾರ ಪ್ರಕರಣ ಸಂಬಂಧ ದಾವಣಗೆರೆ ಜಯನಗರದ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಯನಗರದ ಚರ್ಚ್ ಪಾದ್ರಿ ರಾಜಶೇಖರ ಬಂಧಿತ ಆರೋಪಿ. ಮಹಿಳಾ ಪೊಲೀಸ್ ಠಾಣೆಗೆ ಹಾಜರಾಗಿ ಪಿರ್ಯಾದಿ ನೀಡಿದ ದೂರಿನನ್ವಯ ಬಂಧಿಸಲಾಗಿದೆ.

ಆರೋಪಿತನ ಪತ್ತೆಗಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ. ಸಂತೋಷ ಮತ್ತು ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ. ಮಂಜುನಾಥ ಅವರ ಮಾರ್ಗದರ್ಶನದ ಮೇರೆಗೆ ದಾವಣಗೆರೆ ನಗರ ಪೊಲೀಸ್ ಉಪಾಧೀಕ್ಷಕ ಮಲ್ಲೇಶ ದೊಡ್ಡಮನಿ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಜಯನಗರ ಚರ್ಚ್ ಪಾದ್ರಿ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಖಚಿತ ಮಾಹಿತಿ ಮೇರೆಗೆ ಪ್ರಕರಣದ ಆರೋಪಿ ರಾಜಸೇಖರ್ ನನ್ನು ಆಂಧ್ರಪ್ರದೇಶ ರಾಜ್ಯದ ಹೈದ್ರಾಬಾದ್ ನಗರದಲ್ಲಿ ಪತ್ತೆ ಮಾಡಿ ಬಂಧಿಸಲಾಗಿದೆ.
ಸದ್ಯ ಆರೋಪಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸ್ ಇನ್ ಸ್ಪೆಕ್ಟರ್ ಎಸ್. ಡಿ ನೂರ್ ಅಹಮ್ಮದ್, ಮಹಿಳಾ ಠಾಣಾ ಸಿಬ್ಬಂದಿಯಾದ ರಸೂಲ್ ಸಾಬ್, ಮುತ್ತಪ್ಪ ಬಿ. ಮದ್ದೂರ್, ರಮೇಶ್, ಜಿಲ್ಲಾ ಪೊಲೀಸ್ ಕಚೇರಿಯ ರಾಘವೇಂದ್ರ ಅವರು ಕಾರ್ಯಾಚರಣೆ ತಂಡದಲ್ಲಿದ್ದರು. ಅತ್ಯಾಚಾರದಂತಹ ಗಂಭೀರ ಮತ್ತು ಘೋರ ಪ್ರಕರಣಗಳು ಸಮಾಜದ ಸ್ವಾಸ್ಥ್ಯತೆಯನ್ನು ಕದಡುವಂತಹ ಪ್ರಕರಣಗಳಲ್ಲಿ ತಲೆ ಮರೆಸಿಕೊಂಡಿರುವ ಆರೋಪಿ ದಾವಣಗೆರೆ ಜಯನಗರದ ಚರ್ಚ್ ಪಾದ್ರಿ ರಾಜಶೇಖರ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿ ಸಿಬ್ಬಂದಿಯನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಶ್ಲಾಘಿಸಿದ್ದಾರೆ .