ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ನಾಳೆ ಅಂತಿಮ.. ಬಿಜೆಪಿ ಘೋಷಣೆ ಯಾವಾಗ..?

On: April 6, 2023 12:12 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-04-2023

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ (KARNATAKA) ವಿಧಾನಸಭಾ ಚುನಾವಣೆಗೆ ಹಾಸನ ಕ್ಷೇತ್ರ ಸೇರಿದಂತೆ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಏಪ್ರಿಲ್ 7 ರಂದು ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಕೇಂದ್ರ ಸಮಿತಿಯು ಏಪ್ರಿಲ್ 9 ರಂದು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (CEC) ಏಪ್ರಿಲ್ 9 ರಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ, ಪಿಎಂ ಪ್ರಧಾನಿ ನರೇಂದ್ರ ಮೋದಿ (NARENDRA MODI) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪಟ್ಟಿ ರಿಲೀಸ್ (RELEASE), ಅಸಮಾಧಾನ: 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆ(ELECTION)ಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿಯ ಇಬ್ಬರು ನಾಯಕರಾದ ಬಾಬುರಾವ್ ಚಿಂಚನಸೂರ್ ಮತ್ತು ಎನ್‌. ವೈ. ಗೋಪಾಲಕೃಷ್ಣ ಅವರಿಗೆ ಟಿಕೆಟ್ ಕೊಟ್ಟಿದೆ. ಬಾಬುರಾವ್ ಗುರುಮಿಟ್ಕಲ್ ಕ್ಷೇತ್ರದಿಂದ ಮತ್ತು ಗೋಪಾಲಕೃಷ್ಣ ಮೊಳಕಾಲ್ಮೂರಿನಿಂದ ಸ್ಪರ್ಧಿಸಲಿದ್ದಾರೆ.

ಕರ್ನಾಟಕದಲ್ಲಿ ಸತತ ಎರಡನೇ ಬಾರಿಗೆ ಆಡಳಿತಕ್ಕೆ ಬರಲು ಬಿಜೆಪಿ ಹರಸಾಹಸ ಮಾಡುತ್ತಿದೆ. ಬಿಜೆಪಿಯು ಕೇವಲ ರಾಜಕೀಯ ನಾಯಕರನ್ನು ಪ್ರಚಾರದಲ್ಲಿ ಬಳಕೆ ಮಾಡುತ್ತಿಲ್ಲ. ಚಿತ್ರನಟರಿಗೂ ಗಾಳಹಾಕಿದೆ. ಅಭಿನಯ ಚಕ್ರವರ್ತಿ ವಿಕ್ರಾಂತ್ ರೋಣ ಸ್ಟಾರ್ ಸುದೀಪ್ ಸಂಜೀವ್, ಹಲವಾರು ಕನ್ನಡ ನಟರನ್ನು ಕೇಸರಿ ಪಕ್ಷ ಸಂಪರ್ಕಿಸಿದೆ. ಪ್ರಧಾನಿ ಮೋದಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಸಂರಕ್ಷಣಾ ಚಟುವಟಿಕೆಗಳಲ್ಲಿ ತೊಡಗಿರುವ ಮುಂಚೂಣಿಯ ಕ್ಷೇತ್ರ ಸಿಬ್ಬಂದಿ ಮತ್ತು ಸ್ವಸಹಾಯ ಗುಂಪುಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಅವರು ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment