Home ದಾವಣಗೆರೆ ಜಾರ್ಖಂಡ್ ಉನ್ನತ ಶಿಕ್ಷಣ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತದಿಂದ ನಿಧನ!
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಜಾರ್ಖಂಡ್ ಉನ್ನತ ಶಿಕ್ಷಣ ಸಚಿವ ಸುದಿವ್ಯ ಕುಮಾರ್ ಸೋನು ಹೃದಯಾಘಾತದಿಂದ ನಿಧನ!

Share
ಸಚಿವ
Share

ರಾಂಚಿ (ಸೆಪ್ಟೆಂಬರ್ 06, 2026): ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಹಿರಿಯ ನಾಯಕ ಹಾಗೂ ಜಾರ್ಖಂಡ್ ಸರ್ಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ, ನಗರಾಭಿವೃದ್ಧಿ, ಪ್ರವಾಸೋದ್ಯಮ ಮತ್ತು ಕ್ರೀಡಾ ಸಚಿವ ಸುದಿವ್ಯ ಕುಮಾರ್ ಸೋನು (56) ಅವರು ಶನಿವಾರ ತಡರಾತ್ರಿ ಸಂಭವಿಸಿದ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗಿರಿಡಿ ಶಾಸಕರಾಗಿದ್ದ ಸುದಿವ್ಯ ಕುಮಾರ್ ಅವರ ಆರೋಗ್ಯದಲ್ಲಿ ಶನಿವಾರ ರಾತ್ರಿ ದಿಢೀರ್ ಏರುಪೇರು ಕಂಡುಬಂದಿದ್ದರಿಂದ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗಿನ ಜಾವ ಸುಮಾರು 4:00 ಗಂಟೆಗೆ ಕೊನೆಯುಸಿರೆಳೆದರು.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಆಪ್ತ ಸಲಹೆಗಾರರಾಗಿದ್ದ ಸುದಿವ್ಯ ಕುಮಾರ್ ಅವರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಜ್ಯದ ಸಚಿವರು ಹಾಗೂ ಜೆಎಂಎಂ ಪಕ್ಷದ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಅವರು ಜಾರ್ಖಂಡ್ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಅಧ್ಯಯನ ನಡೆಸಲು ಕರ್ನಾಟಕಕ್ಕೆ ಅಧಿಕೃತ ನಿಯೋಗದೊಂದಿಗೆ ಭೇಟಿ ನೀಡಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles