SUDDIKSHANA KANNADA NEWS/ DAVANAGERE/ DATE-28-05-2025
ಬಳ್ಳಾರಿ: ನಗರದ ಎಸ್.ಪಿ ವೃತ್ತದ ಪಾರ್ವತಿ ನಗರ ಬಡಾವಣೆಯ 1ನೇ ಮಹಡಿ ಅಭಿಕಾಂಪ್ಲೆಕ್ಸ್ನ ಡೋರ್ ನಂ-12ನ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಮೇ 30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ
ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರಿಗೆ ಮಾತ್ರ ಅವಕಾಶ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 636040809 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.