Site icon Kannada News-suddikshana

ಎಸ್ ಎಸ್ ಎಲ್ ಸಿ ಫೇಲ್, ಪಾಸ್, ಪಿಯುಸಿ, ಐಟಿಐ ಆದವರಿಗೂ ಉದ್ಯೋಗಾವಕಾಶ: ನ.22ಕ್ಕೆ ನಡೆಯಲಿದೆ ಉದ್ಯೋಗ ಮೇಳ

SUDDIKSHANA KANNADA NEWS/ DAVANAGERE/ DATE:20-11-2024

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಅಟೋಮೇಟೇಕ್ಸಿಲ್ ಮೈಸೂರು, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ, ಅಪೋಲೋ ಫಾರ್ಮಸಿ, ಬೆಂಗಳೂರು, ಈಕ್ವಲೈಸರ್ ಆರ್.ಸಿ. ಮೈಸೂರು, ಯುವ ಸ್ಪಂದನ, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ ಕ್ಕಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಸ್ವಯಂ-ವಿವರ (ಬಯೋಡೇಟಾ)ಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 8296020826 ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

Exit mobile version