ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭರ್ಜರಿ ಉದ್ಯೋಗಾವಕಾಶ: ಜ3ಕ್ಕೆ ನಡೆಯುವ ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ 40ರಿಂದ 50 ಕಂಪೆನಿಗಳು!

On: January 1, 2025 10:08 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-01-2025

ಬಳ್ಳಾರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ ಜ.3 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ರಲ್ಲಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment