ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

3000ಕ್ಕೂ ಹೆಚ್ಚು ಉದ್ಯೋಗಾವಕಾಶ: ಮಾ.15ಕ್ಕೆ ಐಟಿಐ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ

On: March 1, 2025 6:59 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-03-2025

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ‘ ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಮಾರ್ಚ್ 15 ರಂದು ನಗರದ ಸರ್ಕಾರಿ ಐಟಿಐ ಕಾಲೇಜ್‍ನ ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗದಾತ 40 ಕ್ಕೂ ಹೆಚ್ಚು ಬೃಹತ್ ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಸುಮಾರು ಅವಶ್ಯಕವಿರುವ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಯುವಕ, ಯುವತಿಯರನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಯುವಕ ಯುವತಿಯರು ತಮ್ಮ ವಿದ್ಯಾರ್ಹತೆಯ ದಾಖಲಾತಿಗಳೊಂದಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕ್ಯೂ.ಆರ್ ಕೋಡ್ ಲಿಂಕ್, Google Form Link: https://tinyurl.com/mnm8vykz ,dsmodvg@gmail.com ದೂ.ಸಂ: 08192-259447, 7892956667 ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಹಾಗೂ ಜಿ.ಪಂ ಸಿಇಓ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment