ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

SSLC,PU, ಡಿಪ್ಲೊಮಾ, ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ: ಮಾ.25ಕ್ಕೆ ಉದ್ಯೋಗಮೇಳ

On: March 22, 2025 11:09 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:22-03-2025

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಇದೇ ಮಾ.25 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳಲ್ಲಿನ ಕೊಠಡಿ ಸಂಖ್ಯೆ-51ರಲ್ಲಿನ ಉದ್ಯೋಗ ವಿನಿಮಯ ಕೇಂದ್ರದಲ್ಲಿ “ಉದ್ಯೋಗಮೇಳ” ಆಯೋಜಿಸಲಾಗಿದೆ.

ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಐ.ಟಿ.ಐ, ಡಿಪ್ಲೋಮಾ, ಪಿಯುಸಿ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಸ್ವವಿವರದ ಪ್ರತಿ ಮತ್ತು ಆಧಾರ್ ನಂಬರ್‍ನೊಂದಿಗೆ ಭಾಗವಹಿಸಿ, ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7483808321 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಡಿ.ರವೀಂದ್ರ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment