SUDDIKSHANA KANNADA NEWS/ DAVANAGERE/ DATE:10-06-2024
ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಪ್ರೌಢ) ಹುದ್ದೆಗಳಿಗೆ ಪ್ರಸಕ್ತ ಸಾಲಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಮೂಲಕ ಅರ್ಹ ಅಭ್ಯರ್ಥಿಗಳನ್ನು ವಿಶೇಷ ಶಿಕ್ಷಣದಲ್ಲಿ ವಿಶೇಷ ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸ್ವವಿವರವುಳ್ಳ ಮಾಹಿತಿಯನ್ನು ಜೂನ್ 15 ರೊಳಗಾಗಿ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಅಂಬೇಡ್ಕರ್ ವೃತ್ತ, ದಾವಣಗೆರೆ-577002 ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ :9448999394,08192-296445 ಸಂಪರ್ಕಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರಾತ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್ ತಿಳಿಸಿದ್ದಾರೆ.