SUDDIKSHANA KANNADA NEWS/ DAVANAGERE/ DATE-23-05-2025
ಶಿವಮೊಗ್ಗ: ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂದು ಕೀಟ ಸಂಗ್ರಹಕಾರರ ಹುದ್ದೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನಗದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ 1 ವರ್ಷದ ಅವಧಿಗೆ ಸಂಚಿತ ವೇತನ ರೂ. 16575-00 ರಂತೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಜೂನ್ 02 ರಂದು ಜಿಲ್ಳಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಕ್ಕೆ ನೇರ ಸಂದರ್ಶನ ಕರೆಯಲಾಗಿದೆ.
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಪಿಯುಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳನ್ನು ಸಂಪರ್ಕಿಸುವುದು.