SUDDIKSHANA KANNADA NEWS/ DAVANAGERE/ DATE:14-11-2024
ದಾವಣಗೆರೆ: ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ನವಂಬರ್ 16 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನ್ನಡ ಶಿಕ್ಷಕರು, ವಿದ್ಯಾರ್ಹತೆ ಬಿ.ಎ, ಬಿ.ಇಡಿ.
ಹುದ್ದೆ ಸಂಖ್ಯೆ-4, ದಾವಣಗೆರೆಯ ವಿನೋಬನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಇಂಗ್ಲೀಷ್ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂ: 4, ಕೆ.ಟಿ.ಜೆ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಗಣಿತ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಇಡಿ ಹುದ್ದೆ ಸಂ: 4, ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗೆ ಉರ್ದು ಶಿಕ್ಷಕರು ವಿದ್ಯಾರ್ಹತೆ ಬಿ. ಎ, ಬಿ.ಇಡಿ, ಹುದ್ದೆ ಸಂ:4 ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.