Site icon Kannada News-suddikshana

ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗಾವಕಾಶ

SUDDIKSHANA KANNADA NEWS/ DAVANAGERE/ DATE:10-03-2025

ದಾವಣಗೆರೆ: ಭೂ ಸೇನೆಯಿಂದ ಅಕ್ಟೋಬರ್ 2022ರ ನಂತರ ನಿವೃತ್ತರಾಗಿರುವ ಜೆ.ಸಿ.ಒ ಹಾಗೂ ಹವಾಲ್ದಾರ್ ಬ್ಯಾಂಕ್ ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು, ಮೈಸೂರು. ಮಂಗಳೂರು, ಬೆಳಗಾವಿ, ರಾಯಚೂರು ಮತ್ತು ಶಿವಮೊಗ್ಗದ ಎನ್.ಸಿ.ಸಿ. ಬೆಟಾಲಿಯನ್‍ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವ ಉದ್ದೇಶದಿಂದ ಸೈನ್ಯದಲ್ಲಿ ದುರ್ನಡತೆ ಮತ್ತು ಯಾವುದೇ ವೈದ್ಯಕೀಯ ಕಾರಣಗಳಿಂದ ಸೈನ್ಯದಿಂದ ಬಿಡುಗಡೆಗೊಂಡಿರದ ಆಸಕ್ತ ಮಾಜಿ ಸೈನಿಕರು ಮಾರ್ಚ್ 13 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಮೇಲ್: jtdirpc.kardte@nccindia.nic.in ಹಾಗೂ ಅರ್ಜಿ ಸಲ್ಲಿಸಲು https://nis.bisag-n.gov.in/nis/downloads-public ಮತ್ತು ಕೆಎಸ್‍ಸಿಎಂಎಫ್ ಬಿಲ್ಡಿಂಗ್, 4ನೇ ಮಹಡಿ ನಂ-8, ಕನ್ನಿಂಗ್‍ಹ್ಯಾಮ್ ರಸ್ತೆ, ಬೆಂಗಳೂರು-560001 ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರಾದ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.

Exit mobile version