ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ. 2025-2026 ನೇ ಸಾಲಿಗೆ, ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ ಮೂಲಕ 6,128 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸ್ ಜೊತೆಗೆ ಕಂಪ್ಯೂಟರ್ ಜ್ಞಾನದ ಅಗತ್ಯವಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 20-28 ವರ್ಷಗಳ ನಡುವೆ ಇರಬೇಕು. ಜುಲೈ 1 ರಿಂದ ಜುಲೈ 21, 2024 ರವರೆಗೆ ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ https://ibpsonline.ibps.in/crpcl14jun24/ ಭೇಟಿ ನೀಡಿ.