ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

On: July 11, 2024 12:05 PM
Follow Us:
---Advertisement---

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ ಬ್ಯಾಂಕ್)ನಲ್ಲಿ ಉದ್ಯೋಗಾವಕಾಶ ಲಭ್ಯವಾಗಿದೆ.

ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇರ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಹೆಚ್ಚಿನ ವಿವರ ಈ ಕೆಳಗಿನಂತಿದೆ.

ಸಂಸ್ಥೆಯ ಹೆಸರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಹುದ್ದೆಯ ವಿವರ:

ದ್ವಿತೀಯ ದರ್ಜೆ ಗುಮಾಸ್ತರು ಒಟ್ಟು ಹುದ್ದೆ: 123

ವೇತನ ಶ್ರೇಣಿ : Rs. 24910 to Rs. 55655 + ಇತರ ಭತ್ಯೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-07-2024 (ಹೊಸದಾಗಿ ಸಲ್ಲಿಸುವವರಿಗೆ ಅನ್ವಯವಾಗುತ್ತದೆ)

07-08-2023ರ ಪ್ರಕಟಣೆಯ ಮೂಲಕ ಆಹ್ವಾನಿಸಲಾಗಿರುವ ಅರ್ಜಿಗಳಲ್ಲಿ ಲಿಖಿತ ಪರೀಕ್ಷೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹರೇ, ಇಲ್ಲವೇ ಎಂಬುದನ್ನು ಬ್ಯಾಂಕ್‌ನ ವೆಬ್‌ಸೈಟ್‌ ಮೂಲಕ ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪರಿಶೀಲಿಸಬಹುದು.

ಅನರ್ಹಗೊಂಡಿದ್ದರೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆನ್‌ಲೈನ್‌ ಮೂಲಕ ಸಲ್ಲಿಸಿದ ಅರ್ಜಿ ಫಾರಂನ ಮುದ್ರಣ ಪ್ರತಿ ಪಡೆದು ಅಗತ್ಯವಿರುವ ಎಲ್ಲ ದಾಖಲೆಗಳೊಂದಿಗೆ 18-07-2024 ಸಂಜೆ 4-30ರೊಳಗೆ ಬ್ಯಾಂಕ್‌ನ ಕೇಂದ್ರ ಕಚೇರಿಗೆ ತಲುಪಿಸತಕ್ಕದ್ದು.

ನೇರ ನೇಮಕಾತಿಯ ಅಧಿಸೂಚನೆಯ ಪ್ರತಿ ಹಾಗೂ ಅರ್ಜಿ ಫಾರಂಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. (www.scdccbank.com)

ಅಭ್ಯರ್ಥಿಗಳು ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು. ಶುಲ್ಕವನ್ನು ಪಾವತಿಸಿದ ನಂತರ ಯಾವುದೇ ಸಂದರ್ಭದಲ್ಲೂ ಹಿಂತಿರುಗಿಸಲಾಗುವುದಿಲ್ಲ. ಅಪೂರ್ಣ ಮತ್ತು ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

Join WhatsApp

Join Now

Join Telegram

Join Now

Leave a Comment