(CISF) ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ಕೆಳಗೆ ತಿಳಿಸಲಾಗಿದ್ದು ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಇಂದೇ ಅರ್ಜಿ ಸಲ್ಲಿಸಿ.
ಖಾಲಿ ಹುದ್ದೆಗಳ ವಿವರ :
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ (Central Industrial Security Force) ಒಟ್ಟು 1,130 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಒಟ್ಟು ಹುದ್ದೆಗಳಲ್ಲಿ 33 ಹುದ್ದೆಗಳನ್ನು ಕರ್ನಾಟಕ ರಾಜ್ಯಕ್ಕೆ ಮೀಸಲಿಡಲಾಗಿದ್ದು, ಕನ್ನಡಿಗರಿಗೆ ಇದು ಉತ್ತಮ ಅವಕಾಶವಾಗಿದೆ.
ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು :
ಅರ್ಜಿ ಸಲ್ಲಿಸುವವರು ಕನಿಷ್ಠ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ 18 ರಿಂದ 23 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಇದರ ಅರ್ಥ ಅಭ್ಯರ್ಥಿಗಳು 2001 ಅಕ್ಟೋಬರ್ 1 ರಿಂದ 2006 ಸೆಪ್ಟೆಂಬರ್ 30ರ ಜನಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಅಭ್ಯರ್ಥಿಗಳು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ಅವರಿಗೆ ವರ್ಗಗಳಿಗೆ ಅನುಗುಣವಾಗಿ ಮೂರು ವರ್ಷದಿಂದ ಐದು ವರ್ಷಗಳ ವಯೋಮಿತಿ ಸಡಲಿಕೆ ಇರುತ್ತದೆ.
ದೈಹಿಕ ಅರ್ಹತೆಗಳು :
ಅಭ್ಯರ್ಥಿಗಳ ಕನಿಷ್ಠ ಎತ್ತರ 170 cm ಹಾಗೂ ಎದೆಯ ಸುತ್ತಳತೆ 80 ರಿಂದ 85 cm ಇದ್ದರೆ ಮಾತ್ರ ನೇಮಕಾತಿ ಅರ್ಜಿ ಸಲ್ಲಿಸಲು ಅರ್ಹ ಇರುತ್ತಾರೆ.
ಆಯ್ಕೆಯಾದವರಿಗೆ ಸಿಗುವ ತಿಂಗಳ ವೇತನ:
ಅರ್ಜಿ ಸಲ್ಲಿಸಿ ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಥವಾ ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ವೇತನವು ₹21,700 ರಿಂದ ₹69,100 ರವರೆಗೆ ಇರುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ 100 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ ಇವರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಇದರಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಒಂದು ಲಿಖಿತ ಪರೀಕ್ಷೆಯಲ್ಲಿ ನೂರು ಅಂಕಗಳ 100 ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ. ಈ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.
ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಸಪ್ಟೆಂಬರ್ 30, 2024
ಅರ್ಜಿ ಸಲ್ಲಿಸಲು ಲಿಂಕ್:
https://cisfrectt.cisf.gov.in