(Gram Panchayat) ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಎಲ್ಲಾ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಪ್ರಾಧಿಕಾರ:
ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ
ಹುದ್ದೆ ಹೆಸರು:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು
ಹುದ್ದೆಗಳ ಸಂಖ್ಯೆ:
21
(Gram Panchayat) ವಿದ್ಯಾರ್ಹತೆ:
- ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು.
- ಗ್ರಂಥಾಲಯ ವಿಜ್ಞಾನ ಕೋರ್ಸ್ ಪ್ರಮಾಣಪತ್ರ ಪಡೆದಿದ್ದು, ಹಾಗೂ ಕನಿಷ್ಟ ೩ ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
- ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.
- ವಯೋಮಿತಿ:
- ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಕನಿಷ್ಠ ವಯೋಮಿತಿ – 18 ವರ್ಷ ಹಾಗೂ ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
- ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ನೇಮಕ ವಿಧಾನ ಹೇಗೆ?;
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುವುದು.ಅರ್ಜಿ ಶುಲ್ಕ ವಿವರ:
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.500
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200
- ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100
ಅರ್ಜಿ ಶುಲ್ಕವನ್ನು ಜಿಲ್ಲಾ ಪಂಚಾಯತ್ ಗ್ರಂಥಾಲಯ ಖಾತೆ, ಚಿಕ್ಕಬಳ್ಳಾಪುರ, ಬಿಬಿ ರಸ್ತೆ ಶಾಖೆ, ಕೆನರಾ ಬ್ಯಾಂಕ್ ಖಾತೆ ಸಂಖ್ಯೆ – 110165352339, IFSC CODE CNRB0000487 ಗೆ ಪಾವತಿಸಿ, ಚಲನ್ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್ಲೋಡ್ ಮಾಡುವುದು.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://chikkaballapur.nic.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.(Gram Panchayat) ಸೂಚನೆಗಳು:
- ಆನ್ ಲೈನ್ ಹೊರತುಪಡಿಸಿ, ಇತರೆ ಯಾವುದೇ ಮಾರ್ಗದಲ್ಲೂ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
- ಶಾರ್ಟ್ ಲಿಸ್ಟ್ ಆದವರನ್ನು ಮೆರಿಟ್ ಆಧಾರದಲ್ಲಿ ಸಂದರ್ಶನ ನಡೆಸಿ ಸ್ಥಳ ನಿಯೋಜನೆ ಮಾಡಲಾಗುತ್ತದೆ.
- ಅರ್ಜಿ ಸಲ್ಲಿಸುವಾಗ ಸರಿಯಾದ ಮೊಬೈಲ್ ನಂಬರ್, ಇ-ಮೇಲ್ ವಿಳಾಸ, ಪೂರ್ಣ ವಿಳಾಸ ನೀಡಬೇಕು.
- ಮೀಸಲಾತಿ ನಿಯಮ ಅನ್ವಯವಾಗಲಿದ್ದು, ವಿವಿಧ ನಿಯಮಗಳಡಿ ಮೀಸಲಾತಿ ಕೋರುವವರು ಸಂಬಂಧಿತ ಪ್ರಮಾಣ ಪತ್ರ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
02-09-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
21-09-2024