Site icon Kannada News-suddikshana

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಗುಡ್ ನ್ಯೂಸ್ :ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹೊಸ ಹುದ್ದೆಗಳ ನೇಮಕಾತಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಇಲ್ಲಿದೆ ಉದ್ಯೋಗಾವಕಾಶ, ಹೌದು ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ: ಗ್ರಾಮ ಪಂಚಾಯತ್ ಇಲಾಖೆ

ಕೆಲಸದ ಹೆಸರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಕೆಲಸದ ಸ್ಥಳ: ಚಾಮರಾಜನಗರ

ಒಟ್ಟು ಹುದ್ದೆಗಳ ಸಂಖ್ಯೆ: 15

ಈ ಹುದ್ದೆಗೆ ಅರ್ಜಿಸಲ್ಲಿಸುವ ಬಗೆ: ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕು.

ಈ ಹುದ್ದೆಗೆ ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು

ವಯೋಮಿತಿ ಸಡಲಿಕೆ: SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷಗಳು.

CAT-2A/2B/3A/3B ಅಭ್ಯರ್ಥಿಗಳಿಗೆ: 03

ಅಂಗವಿಕಲ/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟಿರುತ್ತದೆ?

ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200.

2A ಮತ್ತು 2B ಅಭ್ಯರ್ಥಿಗಳಿಗೆ: ರೂ.100.

SC/ST ಅಭ್ಯರ್ಥಿಗಳಿಗೆ, Q1: ರೂ.50/-.

ನಿರ್ದಿಷ್ಟವಾಗಿ ಪ್ರತಿಭಾವಂತ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ.

ಈ ಹುದ್ದೆಗೆ ವಿದ್ಯಾರ್ಹತೆ?

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು12ನೇ ತರಗತಿ ಪಾಸ್.

ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್ ಮತ್ತು ಕನಿಷ್ಠ 3 ತಿಂಗಳ ಅವಧಿಯ ಕಂಪ್ಯೂಟರ್ ಕೋರ್ಸ್ ಅನ್ನು ಪೂರ್ಣಗೊಳಿಸುವುದು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13- 09 -2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 -10 -2024

ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

ಈ ಹುದ್ದೆಯ PDF ನೋಡಿ

Exit mobile version