ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡಕ್ಕೆ ಸಲಹೆಗಾರರು, ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

On: October 21, 2024 9:14 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:21-10-2024

ದಾವಣಗೆರೆ: ಶಿವಮೊಗ್ಗ ಕೃಷಿ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ ಭದ್ರತೆ ಯೋಜನೆಯಡಿ ಜಿಲ್ಲಾ ಮಟ್ಟದ ಯೋಜನಾ ನಿರ್ವಹಣಾ ತಂಡದ ಸೇವೆಯನ್ನು ಪಡೆಯಲು ಗುತ್ತಿಗೆ ಆಧಾರದಲ್ಲಿ ಸಲಹೆಗಾರರು ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಸಲಹೆಗಾರರು 1 ಹುದ್ದೆ ವಿದ್ಯಾರ್ಹತೆ ಬಿಎಸ್‌ಸಿ(ಕೃಷಿ) ಪದವಿ ಹಾಗೂ ಸ್ನಾತಕೋತ್ತರ ಪದವಿ, ತಾಂತ್ರಿಕ ಸಹಾಯಕರು 2 ಹುದ್ದೆ ವಿದ್ಯಾರ್ಹತೆ ಬಿ.ಎಸ್.ಸಿ(ಕೃಷಿ) ಪದವಿ, ಉತ್ತಮ ಕಂಪ್ಯೂಟರ್ ಪರಿಣಿತಿ, ಕೃಷಿ ಸಂಶೋಧನೆ ಹಾಗೂ ಕೃಷಿ ವಿಸ್ತರಣಾ ಕಾರ್ಯಕ್ರಮದಲ್ಲಿ ಅನುಭವ ಉಳ್ಳವರಿಗೆ ಆದ್ಯತೆ ನೀಡಲಾಗುತ್ತದೆ.

ಈ ನೇಮಕಾತಿಯು ದಿ: 31-03-2025 ರವರೆಗೆ ಅಥವಾ ಕೃಷಿ ಆಯುಕ್ತಾಲಯದ ಮುಂದಿನ ಆದೇಶಕ್ಕೆ ಒಳಪಟ್ಟಿರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಇಲಾಖೆ/ಸಂಸ್ಥೆಗಳಿAದ ನಿವೃತ್ತಿಯಾಗಿದ್ದಲ್ಲಿ (ಪಿಂಚಣಿ ಪಡೆಯುತ್ತಿದ್ದಲ್ಲಿ) ಈ ನೇಮಕಾತಿಗೆ ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ವಿವರಿಸಿರುವ ಹುದ್ದೆಗಳಿಗೆ ಕನಿಷ್ಟ ವಯೋಮಿತಿ 18 ವರ್ಷಗಳು, ಗರಿಷ್ಟ ಸಾಮಾನ್ಯ 35, ಪ.ಜಾತಿ/ಪ.ಪಂ/ಪ್ರವರ್ಗ-1 40 ವರ್ಷಗಳು. ಆಸಕ್ತರು ಅರ್ಜಿ ನಮೂನೆಯನ್ನು ಜಂಟಿ ನಿರ್ದೇಶಕರ ಕಚೇರಿ ಓ ಟಿ ರಸ್ತೆ ಶಿವಮೊಗ್ಗ ಇಲ್ಲಿಂದ ಅರ್ಜಿಯನ್ನು ಪಡೆದು ನ.05 ರೊಳಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೋಂದಣಿ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು ಶಿವಮೊಗ್ಗ ಇವರಿಗೆ ಸಲ್ಲಿಸಬಹುದೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment