SUDDIKSHANA KANNADA NEWS/ DAVANAGERE/ DATE:07-11-2024
ಧಾರವಾಡ: ಕೃಷಿ ವಿಶ್ವವಿದ್ಯಾಲಯದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹಾಗೂ ಅರೆಕಾಲಿಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನವೆಂಬರ್ 12 ರಂದು ಕೃವಿವಿ ಕುಲಸಚಿವರ ಸಂದರ್ಶನ ಕೊಠಡಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.