Site icon Kannada News-suddikshana

ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE:28-07-2024

ಬಳ್ಳಾರಿ/ ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿಯ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿಷಯವಾರು ಖಾಲಿ ಇರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ವಸತಿ ಶಾಲೆಗೆ ಬೇಕಾಗಿರುವ ಬಿ.ಎಸ್, ಬಿ.ಎಡ್ ಮತ್ತು ಕಾಲೇಜಿಗೆ ಎಂ.ಎ. ಬಿ.ಎಡ್, ಎಂ.ಎಸ್‌ಸಿ ಬಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಶಿಕ್ಷಕರು ಮತ್ತು ಉಪನ್ಯಾಸಕರು ಜು.೩೦ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ಕಂಪ್ಲಿಯ 6ನೇ ವಾರ್ಡ್ ವಿನಾಯಕ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮತ್ತು ಬಳ್ಳಾರಿಯ ಬೆಳಗಲ್ಲು ರಸ್ತೆಯ ಆಕಾಶವಾಣಿ ಹತ್ತಿರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಕಚೇರಿಗೆ ಸಂಪರ್ಕಿಸಬಹುದು.

ಅತಿಥಿ ಶಿಕ್ಷಕ, ಅತಿಥಿ ಉಪನ್ಯಾಸಕರ ಹುದ್ದೆಗಳು:

ಕಂಪ್ಲಿಯ ೬ನೇ ವಾರ್ಡ್ನ ವಿನಾಯಕ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗಣಿತ ವಿಷಯಕ್ಕೆ ಅತಿಥಿ ಶಿಕ್ಷಕರು ಬೇಕಾಗಿದ್ದು, ಪ್ರಾಂಶುಪಾಲರ ಮೊ: ಮೊ.೯೪೮೦೯೩೩೭೩೦.

ಬಳ್ಳಾರಿಯ ಬೆಳಗಲ್ಲು ರಸ್ತೆಯ ಆಕಾಶವಾಣಿ ಹತ್ತಿರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ, ಕನ್ನಡ, ಆಂಗ್ಲ ಮತ್ತು ಉರ್ದು ವಿಷಯಗಳಿಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದು, ಪ್ರಾಂಶುಪಾಲರ ಮೊ.೮೮೬೧೬೨೩೮೧೪ ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ: ೦೮೩೯೨-೨೦೦೧೨೫/೨೨೪, ಸಹಾಯವಾಣಿ ಕೇಂದ್ರ ೨೪*೭ ಮೊ. ೮೨೭೭೭೯೯೯೯೦ ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version