SUDDIKSHANA KANNADA NEWS/ DAVANAGERE/ DATE:16-07-2024
ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹು ಕಾರ್ಯಕಮ (ತಾಂತ್ರಿಕೇತರ) ಸಿಬ್ಬಂದಿ (ಮಲ್ಟಿ ಟಾಸ್ಕಿಂಗ್ ಸ್ಟಾಫ್(ಎಂ.ಟಿ.ಎಸ್) ಮತ್ತು ಹವಾಲ್ದಾರ್ (ಸಿ ಬಿ ಐ ಸಿ ಮತ್ತು ಸಿ ಬಿ ಎನ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಪರೀಕ್ಷೆ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರÀಬೇಕು. ವಯೋಮಿತಿ ಸಿ.ಬಿ.ಎನ್‍ನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷಗಳು. ಸಿ.ಬಿ.ಐ.ಸಿನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷಗಳು. ಎಸ್ಸಿ, ಎಸ್ಟಿ, ಒ.ಬಿ.ಸಿ, ಇ.ಎಸ್.ಎಮ್ ಅಭ್ಯರ್ಥಿಗಳಿಗೆ ನಿಯಾಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ವೆಬೆಸೈಟ್ https://ssc.gov.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ : 08192259446 ಇಲ್ಲಿಗೆ ಸಂಪರ್ಕಿಸಬಹುದಾಗಿದೆ. ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.