SUDDIKSHANA KANNADA NEWS/ DAVANAGERE/ DATE:05-08-2024
ದಾವಣಗೆರೆ: ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿಯ ಆಲೂರು ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 20 ರೊಳಗಾಗಿ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿದಾರರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವಾಸಸ್ಥಳ ದೃಡೀಕರಣ ಪತ್ರ, ಚುನಾವಣೆ ಗುರುತಿನ ಚೀಟಿ, ಪಡಿತರ ಚೀಟಿ, ವ್ಯಾಸಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸ್ವಯಂ ಘೋಷಣಾ ಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣ ಪತ್ರ, ಚಾರಿತ್ರö್ಯದ ಬಗ್ಗೆ ಪೊಲೀಸ್ ವರದಿಯನ್ನು ಸಲ್ಲಿಸಬೇಕು ಎಂದು ತಹಶೀಲ್ದಾರ್ ಡಾ.ಅಶ್ವಥ್ ತಿಳಿಸಿದ್ದಾರೆ.