ಜೊತೆಗೆ ಕೆಲಸ ಮಾಡಿಕೊಂಡಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಇದೀಗ ಜೈಲು ಸೇರಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆದಿದ್ದು ಇದೀಗ ನ್ಯಾಯಾಲಯ ಜಾನಿ ಮಾಸ್ಟರ್ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಜಾನಿ ಮಾಸ್ಟರ್ ವಿರುದ್ಧ ರಾಯದುರ್ಗ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ರು. ಪೊಲೀಸರ ಕೈಗೆ ಸಿಗದೆ ಓಡಾಡ್ತಿದ್ದ ಜಾನಿ ಮಾಸ್ಟರ್ನನ್ನು ಗೋವಾದಲ್ಲಿ ಬಂಧಿಸಿ, ಇಂದು ಮುಂಜಾನೆ ನನ್ನು ಹೈದಾರಾಬಾದ್ಗೆ ಕರೆತಂದು ನ್ಯಾಯಾಲಕ್ಕೆ ಹಾಜರು ಪಡಿಸಲಾಯಿತು.
ಜಾನಿ ಮಾಸ್ಟರ್ನನ್ನು ಚೆರ್ಲಪಲ್ಲಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುವುದು. ನ್ಯಾಯಾಂಗ ಬಂಧನದ ಅವಧಿಯಲ್ಲಿ ಪೊಲೀಸರು ವಿವರವಾಗಿ ತನಿಖೆ ನಡೆಸಲಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರಿಂದ ಜಾನಿ ಮಾಸ್ಟರ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೋವಾದ ಹೋಟೆಲ್ ನಲ್ಲಿದ್ದ ಜಾನಿ ಮಾಸ್ಟರ್ ನನ್ನು ಬಂಧಿಸಿದ ಪೊಲೀಸರು ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ರು.
ಪೊಲೀಸ್ ತನಿಖೆಯಲ್ಲಿ ಜಾನಿ ಮಾಸ್ಟರ್ ಕೆಲ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗ್ತಿದೆ. ನ್ಯಾಯಾಲಯಕ್ಕೆ ಕರೆದೊಯ್ಯುವ ವೇಳೆ ಮಾತಾಡಿದ ಜಾನಿ ಮಾಸ್ಟರ್, ನಾನು ಯಾವುದೇ ಲೈಂಗಿಕ ಕಿರುಕುಳ ನೀಡಿಲ್ಲ. ಅವರ ವಿರುದ್ಧ ಕೆಲವರು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಕಾನೂನು ಹೋರಾಟ ನಡೆಸಿ ಪ್ರಾಮಾಣಿಕವಾಗಿ ಹೊರಬರುತ್ತೇನೆ ಎಂದು ಹೇಳಿದ್ದಾರೆ. ಜಾನಿ ಮಾಸ್ಟರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ. ರಾಯದುರ್ಗ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಇದೇ ತಿಂಗಳ 15 ರಂದು ಎಫ್‌ಐಆರ್ ದಾಖಲಿಸಿದ್ದಾರೆ. ನಂತರ ಈ ಪ್ರಕರಣವನ್ನು ನರಸಿಂಗಿ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಪೊಲೀಸರು ಈಗಾಗಲೇ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.