SUDDIKSHANA KANNADA NEWS/ DAVANAGERE/ DATE:03-04-2025
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿದ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪುಷ್ಪಾ ಸಿನಿಮಾದ ಸ್ಟೈಲ್ ನಂತೆ ಆಡಳಿತ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜುಕುಂಗಾ ನಹಿ ಎಂದು ಅಬ್ಬರಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದ ಅನುರಾಗ್ ಠಾಕೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಘರ್ಜಿಸುತ್ತಾ, ವಕ್ಫ್ ಭೂಮಿಯನ್ನು ಕಾಂಗ್ರೆಸ್ ನವರು ಕಬಳಿಸಿದ್ದಾರೆ ಎಂಬ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಆರೋಪಕ್ಕೆ ತೀಕ್ಷ್ಣವಾಗಿ ಖಂಡಿಸಿದರು. ಪುಷ್ಪಾ ಸಿನಿಮಾ ಸ್ಟೈಲ್ ನಂತೆ ರುಕುಗಾ ನಹಿ ಎಂದು ಕಿಡಿಕಾರಿದರು.
ಒಂದು ದಿನದ ಹಿಂದೆ ಲೋಕಸಭೆಯಲ್ಲಿ ವಕ್ಫ್ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ಆರೋಪವನ್ನು ಮಾಡಿದ್ದ ಠಾಕೂರ್ ಅವರ ಆರೋಪದಲ್ಲಿ ಹುರುಳಿಲ್ಲ ಎಂದು ಸಿನಿಮೀಯ ರೀತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದರು.
ಅನುರಾಗ್ ಠಾಕೂರ್ ಆರೋಪ ಸತ್ಯಕ್ಕೆ ದೂರವಾದದ್ದು ಮತ್ತು ಆಧಾರರಹಿತ ಎಂದು ತಳ್ಳಿಹಾಕಿದರಲ್ಲದೇ, ಕೂಡಲೇ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಅಧಿಕಾರದ ಮದದಿಂದ ವರ್ತಿಸುತ್ತಿರುವ ಆಡಳಿತ ಪಕ್ಷ ಬಿಜೆಪಿ ಸೇರಿದಂತೆ
ಮೈತ್ರಿಕೂಟದ ಪಕ್ಷಗಳಿಗೆ ತಲೆಬಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.