ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲು: ಬ್ಲ್ಯೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳು ಸೆರೆ ಸಿಕ್ಕಿದ್ದು ಹೇಗೆ….?

On: October 28, 2023 4:22 PM
Follow Us:
---Advertisement---

SUDDIKSHANA KANNADA NEWS\ DATE:28-10-2023

ಕಲಬುರಗಿ: ಪಿಎಸ್ಐ ಪರಿಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ. ಕರ್ನಾಟಕ ಪರೀಕ್ಷಾ ಪರಿಷತ್ ನಡೆಸಿದ ವಿವಿಧ ನಿಗಮಗಳ ಖಾಲಿ ಹುದ್ದೆ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ನಗರದ ಶ್ರೀ ಶರಣ ಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರೀಮೂರ್ತಿ ಎಂಬಾತನನ್ನು ಪೊಲೀಸರು ರೆಡ್ ಹ್ಯಾಂಡ ಆಗಿ ಹಿಡಿದು ಬಂಧಿಸಿದ್ದಾರೆ. ಇಂದು ಎಫ್ ಡಿಎ ಕನ್ನಡ ಇಂಗ್ಲಿಷ್ ಕಮುನಿಕೇಷನ್ ಪರೀಕ್ಷೆ ನಡೆದಿದ್ದು ಬ್ಲೂಟೂತ್ ಸಹಾಯದಿಂದ ಹೊರಗಿನವರಿಂದ ಕೀ ಉತ್ತರ ಪಡೆದು ಅಕ್ರಮ ಎಸಗುತ್ತಿದ್ದನಂತೆ, ಬಂಧನದ ಬಳಿಕ ಆರೋಪಿ ತ್ರೀಮೂರ್ತಿಯನ್ನು ಇಎನ್ ಟಿ ವೈದ್ಯರ ಬಳಿ ಕರೆದೊಯ್ದು ತಪಾಸಣೆ ಕೂಡಾ ನಡೆಸಲಾಗಿದೆ. ಇನ್ನೋರ್ವ ಅಭ್ಯರ್ಥಿ ಅಭಿಷೇಕ ಎಂಬಾತನನ್ನು ಕೂಡಾ ಪೊಲೀಸರು ವಶಕ್ಕೆ ಪಡೆದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮತ್ತೊಂದಡೆ ಕಲಬುರಗಿ ಜಿಲ್ಲೆಯ ಅಫಜಪುರ ಪಟ್ಟಣದ ಮಾಹಾಂತೇಶ್ವರ ವಿದ್ಯಾವರ್ಧಕ ಸಂಘದ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ಅಭ್ಯರ್ಥಿಗಳು ಸೇರಿ ಐವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಪರೀಕ್ಷಾ ಕೇಂದ್ರದ ಹತ್ತಿರ ಕಾರ್ ವೊಂದರಲ್ಲಿ ಕುಳಿತು ಬ್ಲೂಟೂತ್ ಮುಖಾಂತರ ಅಭ್ಯರ್ಥಿಗಳಿಗೆ ಕೀ ಉತ್ತರ ರವಾನಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಉತ್ತರ ಹೇಳ್ತಿದ್ದ ಮೂವರನ್ನು ವಶಕ್ಕೆ ಪಡೆದು ಇವರು ಕೊಟ್ಟ ಮಾಹಿತಿ ಅನ್ವಯ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಅಭ್ಯರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕಲಬುರಗಿ ಹಾಗೂ ಅಫಜಲಪುರನಲ್ಲಿ ಸಿಕ್ಕಿಬಿದ್ದ ಬಹುತೇಕರು ಅಫಜಲಪುರ ತಾಲೂಕಿನ ಸೊನ್ನ ಗ್ರಾಮದವರು ಎನ್ನಲಾಗುತ್ತಿದೆ. ಪಿಎಸ್ಐ ಪರೀಕ್ಷೆ ಹಗರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ಕೂಡಾ ಇದೆ ಗ್ರಾಮದವರಾಗಿದ್ದಾರೆ. ಅಕ್ರಮದ ಹಿಂದೆ ದೊಡ್ಡ ಜಾಲದ ಶಂಕೆ ವ್ಯಕ್ತವಾಗಿದೆ. 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗಣರದಲ್ಲಿ ರಾಜ್ಯದಾದ್ಯಂತ ಕಲಬುರಗಿ ಬಾರಿ ಸದ್ದು ಮಾಡಿತ್ತು. ಸಿಐಡಿ ಪೊಲೀಸರು ತನಿಖೆ ನಡೆಸಿ 54 ಕ್ಕೂ ಅಧಿಕ ಜನರನ್ನು ಕೂಡಾ ಬಂಧಿಸಿದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಇದೀಗ ಕರ್ನಾಟಕ ಪರೀಕ್ಷಾ ಪರಿಷತ್ ನಡೆಸುತ್ತಿರುವ ವಿವಿಧ ನಿಗಮಗಳ 750 ಹುದ್ದೆಗಳಿಗೆ ಪರಿಕ್ಷೆಯಲ್ಲಿ ಅಕ್ರಮ ನಡೆದಿರುವದು ಬೆಳಕಿಗೆ ಬಂದಿದ್ದು ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. ತನಿಖೆ ನಂತರವಷ್ಟೆ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ..

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment