Site icon Kannada News-suddikshana

ಕಲಬುರ್ಗಿ ರಂಗಾಯಣ: ತಂತ್ರಜ್ಞರು ಹಾಗೂ ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

SUDDIKSHANA KANNADA NEWS/ DAVANAGERE/ DATE_09-07_2025

ಬೆಂಗಳೂರು: ಕಲುಬುರ್ಗಿ ರಂಗಾಯಣದಿಂದ ಒಂದು ವರ್ಷದ ಅವಧಿಗೆ ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುಲು 3 ಜನ ತಂತ್ರಜ್ಞರು ಮತ್ತು 12 ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನಿಲಾಗಿದೆ.

ತಂತ್ರಜ್ಞರ ನೇಮಕದ ನಿಬಂಧನೆಗಳು:

ಕಲಾವಿದರ ನೇಮಕದ ನಿಬಂಧನೆಗಳು

ಕಲಬುರ್ಗಿ ರಂಗಾಯಣವು 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಕಲಾವಿದರ ನೇಮಕದಲ್ಲಿ 04 ಜನ ಮಹಿಳೆಯರು ಮತ್ತು 04 ಜನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಲಾವಿದರಿಗೆ ಮೀಸಲಿಡಲಾಗಿದೆ. ಈ ನೇಮಕಗಳಲ್ಲಿ ಕನಿಷ್ಠ ಶೇ.50 ಹುದ್ದೆಗಳನ್ನು ಪ್ರಾದೇಶಿಕ ವಲಯದ ಕಲಾವಿದರಿಗೆ ಮೀಸಲಿಡಲಾಗಿದೆ.

ರಂಗಪರಿಣತಿಯೇ ಪ್ರಥಮ ಅರ್ಹತೆ ಹಾಗೂ ರಂಗಶಿಕ್ಷಣದ ಅರ್ಹತೆಗಳು ಅಪೇಕ್ಷಣೀಯ ಹೊರತು ಕಡ್ಡಾಯವಲ್ಲ. ರಂಗಪ್ರಯೋಗಗಳಲ್ಲಿ ಭಾಗವಹಿಸಿದವರಿಗೆ ಆದ್ಯತೆ ನೀಡಲಾಗುವುದು. ನೇಮಕಗೊಂಡ ಕಲಾವಿದರು ರೆಪರ್ಟರಿಯ ಭಾಗವಾಗಿದ್ದು, ರಂಗಶಿಕ್ಷಣದ ಎಲ್ಲಾ ವಿಭಾಗಗಳಲ್ಲಿ ತರಬೇತಿ ಪಡೆಯುವುದರ ಜೊತೆಗೆ ಅಭಿನಯನ ಜವಾಬ್ದಾರಿಯನ್ನು ನಿಭಾಯಿಸಬೇಕು.

ಪಾರಂಪರಿಕ ಕಲೆಯ ಕುಟುಂಬಗಳಿಂದ ಬಂದ ಕಲಾವಿದರಿಗೆ ಆದ್ಯತೆ ನೀಡಲಾವುದು. ಆಯ್ಕೆಯಾದ ಕಲಾವಿದರಿಗೆ ಮಾಸಿಕ ಸಂಭಾವನೆ ತಿಂಗಳಿಗೆ ರೂ.18,000 ನೀಡಲಾಗುವುದು. ಇತರೆ ಯಾವುದೇ ಭತ್ಯೆಗಳನ್ನು ನೀಡುವುದಿಲ್ಲ. ಊಟ, ವಸತಿ ವ್ಯವಸ್ಥೆಯನ್ನು ಕಲಾವಿದರೇ ನೋಡಿಕೊಳ್ಳಬೇಕು. ಈ ನೇಮಕವು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಪ್ರಸ್ತುತ ನೇಮಕವಾಗುವ ದಿನಾಂಕದಿAದ ಒಂದು ವರ್ಷದ ಅವಧಿಯವರೆಗೆ ಇರುತ್ತದೆ.

ಕಲಾವಿದರ ಆಯ್ಕೆಯನ್ನು ಪಾರದರ್ಶಕವಾಗಿ ರಂಗಸಮಾಜವು ಆಯಾರಂಗಾಯಣಗಳ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರಚಿಸುವ ಉಪ ಸಮಿತಿಯು ಆಯ್ಕೆ ಮಾಡುತ್ತದೆ. ತರಬೇತಿಯ ಅವಧಿಯಲ್ಲಿ ಯಾವುದೇ ಕಲಾವಿದರ ನಡವಳಿಕೆ ಅನಪೇಕ್ಷಿತವೆಂದು ಕಂಡು ಬಂದಲ್ಲಿ, ಅಂತಹ ಕಲಾವಿದರನ್ನು ತಕ್ಷಣದಲ್ಲಿ ತೆಗೆದು ಹಾಕುವ ಅಧಿಕಾರ ಕಲಬುರ್ಗಿ ರಂಗಾಯಣ ಹಾಗೂ ರಂಗಸಮಾಜಕ್ಕೆ ಇರುತ್ತದೆ.

ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆಯು ರಂಗಾಯಣದ ಚಟುವಟಿಕೆಗಳ ಅಗತ್ಯದ ಹಿನ್ನಲೆಯಲ್ಲಿ ಗೌರವ ಸಂಭಾವನೆ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇವು ಸರ್ಕಾರದ ಖಾಯಂ ಹುದ್ದೆಗಳಾಗಿರುವುದಿಲ್ಲ. ಆಯ್ಕೆಯಾದ ಕಲಾವಿದರು, ತಂತ್ರಜ್ಞರು ರಂಗಸಮಾಜವು ವಿಧಿಸುವ ಷರತ್ತುಗಳಿಗೆ ಬದ್ಧರಾಗಿರಬೇಕು.

ಅರ್ಹತೆಯುಳ್ಳ 20 ರಿಂದ 32 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ರಂಗಾಯಣದ ನಿಯಾಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಮೇಲ್ಕಂಡ ತಂತ್ರಜ್ಞರು ಹಾಗೂ ಕಲಾವಿದರು ಆಯಾ ರಂಗಾಯಣದ ನಿರ್ದೇಶಕರ ಹಾಗೂ ಆಡಳಿತಾಧಿಕಾರಿಯವರ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುತ್ತಾರೆ. ಈ ಮೇಲ್ಕಂಡ ಷರತ್ತುಗಳಲ್ಲದೇ ಇತರೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಆಯ್ಕೆ ಸಮಿತಿಗೆ ಇರುತ್ತದೆ. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.

ಸಂದರ್ಶನದ ವೇಳೆ ಹಾಜರುಪಡಿಸಬೇಕಾದ ದಾಖಲೆ:

ಆಧಾರ್ ಕಾರ್ಡ್, ಜನ್ಮದಿನಾಂಕ ದೃಢೀಕರಣ ಪತ್ರ, ಎನ್.ಎಸ್.ಡಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ, ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸಬೇಕು.

ಅರ್ಜಿ ನಮೂನೆಯನ್ನು ರಂಗಾಯಣದ ವೆಬ್‌ಸೈಟ್ www.rangayanakalaburagi.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಆಸಕ್ತ ಕಲಾವಿದರು ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಜುಲೈ 28 ಸಂಜೆ 5.30 ಗಂಟೆಯ ಒಳಗೆ ಕಲಬುರ್ಗಿಯ ಶಹಾಬಾದ ವರ್ತುಲ ರಸ್ತೆಯ ಡಾ.ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಛಯದ ರಂಗಾಯಣ ಆವರಣದ ಆಡಳಿತಾಧಿಕಾರಿಗಳ ಕಚೇರಿ ಅಥವಾ ಇ-ಮೇಲ್ ವಿಳಾಸ: rangayanakalaburgi@gmail.com ಗೆ ಅರ್ಜಿ ಸಲ್ಲಿಸಬಹುದು. ಸಂದರ್ಶನದ ದಿನವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಕಲಬುರ್ಗಿ ರಂಗಾಯಣದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version