Home ದಾವಣಗೆರೆ ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ, ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸುವುದು ಕಡ್ಡಾಯ, ಶೀಘ್ರದಲ್ಲೇ ಸರ್ಕಾರದ ಅಧಿಕೃತ ಆದೇಶ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್
ದಾವಣಗೆರೆನವದೆಹಲಿಬೆಂಗಳೂರು

ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ, ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸುವುದು ಕಡ್ಡಾಯ, ಶೀಘ್ರದಲ್ಲೇ ಸರ್ಕಾರದ ಅಧಿಕೃತ ಆದೇಶ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

Share
ಕನ್ನಡ
Share

ಬೆಂಗಳೂರು: “ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಸದಾಶಿವನಗರ ನಿವಾಸ ಮತ್ತು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಈ ವಿಚಾರ ತಿಳಿಸಿದರು.

“ನಾನು ಈಗಷ್ಟೇ ರಾಷ್ಟ್ರಧ್ವಜದ ಪಕ್ಕ ಕನ್ನಡ ಧ್ವಜ ಹಾರಿಸಿದ್ದೇನೆ. ಈ ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನಮಾನ ನೀಡಲು ಮುಂದಾಗಿದ್ದೇವೆ. ಈ ಹಿಂದೆ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ಆದರೆ ನಮಗೆ ಈವರೆಗೂ ಮಾನ್ಯತೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದು, ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಲಾಗುವುದು. ರಾಷ್ಟ್ರಧ್ವಜದ ಗೌರವ ಮತ್ತು ನಿಯಮಗಳಿಗೆ ಯಾವುದೇ ಧಕ್ಕೆಯಾಗದಂತೆ ಕನ್ನಡ ಧ್ವಜದ ಬಳಕೆ, ಸ್ಥಾನಮಾನ ಹಾಗೂ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ಅಂಶಗಳನ್ನು ಪರಿಶೀಲಿಸಲಾಗುತ್ತಿದೆ” ಎಂದರು.

“ಮತ್ತೊಮ್ಮ ಸಂಪುಟದಲ್ಲಿ ತೀರ್ಮಾನ ಮಾಡಿ ಕಾನೂನು ತಂದು ರಾಷ್ಟ್ರಧ್ವಜದ ಪಕ್ಕ ಕನ್ನಡ ಧ್ವಜವನ್ನು ಹಾರಿಸಲು ತೀರ್ಮಾನ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಒಳಗಡೆ ಮಾತ್ರವಲ್ಲ, ವಿಧಾನಸೌಧದಲ್ಲೂ ಈ ಧ್ವಜವನ್ನು ಹಾರಿಸಲು ಸಾರ್ವಜನಿಕ ಚರ್ಚೆಗೆ, ಶಾಸಕರ ಚರ್ಚೆಗೆ ಇನ್ನು ಮುಂದೆ ಅವಕಾಶ ಮಾಡಿಕೊಟ್ಟು ಚಳಿಗಾಲದ ಅಧಿವೇಶನದಲ್ಲಿ ಇದಕ್ಕೆ ಹೊಸ ರೂಪ ಕೊಡಲು ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ಣಯ ಮಾಡಿ ಕಾನೂನುಬದ್ಧವಾಗಿ ಏನೆಲ್ಲ ರಕ್ಷಣೆ ಮಾಡಬೇಕು ಆ ಕೆಲಸ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇದು ನಮ್ಮದಲ್ಲ, ನಿಮ್ಮ ಸರ್ಕಾರ. ಕನ್ನಡಿಗರ ಭಾವನೆಯ ಹೆಗ್ಗುರುತಾಗಿರುವ ಕೆಂಪು ಹಳದಿ ಬಾವುಟಕ್ಕೆ ಗೌರವ ನೀಡಲಾಗುವುದು. ಕನ್ನಡದ ಜ್ಞಾನ, ಪರಂಪರೆ, ಸಂಸ್ಕೃತಿ, ಸರ್ವಧರ್ಮ ಪರಂಪರೆ ಸಮಾನತೆ, ಶಾಂತಿಯ ಸಂದೇಶ ಸಾರುವ ಈ ಬಾವುಟವನ್ನು ನಾಡಧ್ವಜವಾಗಿ ಅಧಿಕೃತಗೊಳಿಸಲು ಮುಂದಾಗಿದ್ದೇವೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕದ ಹೆಗ್ಗುರತನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವುದಕ್ಕೆ ಈ ತೀರ್ಮಾನ ಮಾಡಲಾಗುವುದು” ಎಂದು ವಿವರಿಸಿದರು.

ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ

“ಕನ್ನಡ ರಾಜ್ಯೋತ್ಸವದ 71ನೇ ವರ್ಷದಿಂದ ಮುಂದಿನ ಒಂದು ವರ್ಷದ ಅವಧಿಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಕನ್ನಡದ ಹಿರಿಮೆ ಸಾರಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಧ್ವಜ ಹಾರಿಸುವುದರ ಜತೆಗೆ, ಸರ್ಕಾರದ ಬೆಂಬಲ ಹೊಂದಿರುವ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ ಇದೆ. ಖಾಸಗಿ ಸಂಸ್ಥೆಗಳೂ ಕನ್ನಡ ಧ್ವಜ ಹಾರಿಸುವಂತೆ ಈ ತಿಂಗಳಲ್ಲೇ ಸರ್ಕಾರದ ಆದೇಶ ಹೊರಡಿಸಲು ಸಿದ್ಧತೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಭಾಷೆ ಸಂಸ್ಕೃತಿ, ಜ್ಞಾನದ ಪ್ರತಿಬಿಂಬ

“ನಮ್ಮ ಉಸಿರು, ಹೆಸರು, ಕಸುಬು ಕನ್ನಡ. ನಮ್ಮ ನುಡಿ ಬಹಳ ಚೆಂದ, ಅದರಲ್ಲಿ ಏನೇ ಗೀಚಿದರೂ ಆಗುವುದು ಶ್ರೀಗಂಧ. ತನು ಕನ್ನಡ, ಮನ ಕನ್ನಡ, ನುಡಿ ಕನ್ನಡ, ನಡೆ ಕನ್ನಡ. ಅದನ್ನು ಆಚರಿಸಲು ನಾವು ಸೇರಿದ್ದೇವೆ. ಜಗದ ಏಳಿಗೆಗೆ ದಾ ರಾ ಬೇಂದ್ರೆ ಅವರು ಕನ್ನಡ ಕರ್ನಾಟಕದ ದಿಕ್ಸೂಚಿ, ಕರ್ನಾಟಕ ಭಾರತದ ಭವಿಷ್ಯ. ಮಾತೃಭಾಷೆ ಮೂಲಕ ಜ್ಞಾನದ ಸಂಸ್ಕೃತಿ ಹರಿಯುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. ಭಾಷೆ ಸಂಸ್ಕೃತಿ, ಜ್ಞಾನದ ಪ್ರತಿಬಿಂಬ, ಹೆತ್ತ ತಾಯಿ, ಹುಟ್ಟಿದ ನಾಡು ಸ್ವರ್ಗಕ್ಕಿಂತ ಮಿಗಿಲು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ನಾವು ಬೇರೆಯವರ ಮನಸ್ಸನ್ನು ಕನ್ನಡದಿಂದಲೇ ಗೆಲ್ಲಬೇಕು. ನಾವು ಯಾವುದೇ ದೇಶದಲ್ಲಿದ್ದರೂ ನಮ್ಮ ಉಸಿರು ಕನ್ನಡವಾಗಿರಬೇಕು” ಎಂದು ಕರೆಕೊಟ್ಟರು.

Share

Leave a comment

Leave a Reply

Your email address will not be published. Required fields are marked *

Related Articles