ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳ ಮಾಹಿತಿ ಜನರಿಗೆ ತಲುಪಿಸಲು ಉರ್ದು ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯರು ಎಂದಿನಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಅಧಿಕಾರದಲ್ಲಿದ್ದಾಗ ತಾವೂ ಸಹ ಉರ್ದು ಪತ್ರಿಕೆಗಳಿಗೆ ಜಾಹೀರಾತು ನೀಡಿದ್ದ ಬಿಜೆಪಿ ನಾಯಕರು, ಈಗ ಅದನ್ನು ‘ತುಷ್ಟೀಕರಣ’ ಎಂದು ಕರೆಯುತ್ತಿರುವುದು ಅವರ ರಾಜಕೀಯ ಹಪಾಹಪಿತನ ಮತ್ತು ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.
ಮಾಹಿತಿ ತಲುಪಿಸುವುದು ಸರ್ಕಾರದ ಕರ್ತವ್ಯ:
ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ನಾಗರಿಕನಿಗೂ ತಲುಪಬೇಕು. ಓದುಗರ ಭಾಷೆಯಲ್ಲೇ ಜಾಹೀರಾತು ನೀಡುವುದು ಆಡಳಿತಾತ್ಮಕ ಪ್ರಕ್ರಿಯೆಯೇ ಹೊರತು ರಾಜಕೀಯವಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಕಾಲದ ದಾಖಲೆ:
ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲೂ ಉರ್ದು ಪತ್ರಿಕೆಗಳಿಗೆ ಜಾಹೀರಾತು ನೀಡಲಾಗಿತ್ತು. ಅಂದು ಅದು ತುಷ್ಟೀಕರಣವಾಗಿರಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಕನ್ನಡದ ಬದ್ಧತೆ:
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾಗಿ ಕೆಲಸ ಮಾಡಿದ ನಮಗೆ, ಕನ್ನಡ ಎಂಬುದು ಕೇವಲ ಭಾಷೆಯಲ್ಲ, ಅದು ನಮ್ಮ ಉಸಿರು. ನಾಡು, ನುಡಿ, ಜಲದ ವಿಷಯದಲ್ಲಿ ಯಾರಿಂದಲೂ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.





Leave a comment