Home ದಾವಣಗೆರೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ದಾವಣಗೆರೆಬೆಂಗಳೂರು

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Share
ಕೈಮಗ್ಗ
Share

ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *