Home ಕ್ರೈಂ ನ್ಯೂಸ್ ಇಬ್ಬರೊಟ್ಟಿಗೆ ತನ್ನ ಪತ್ನಿ ಹಾಸಿಗೆಯಲ್ಲಿ ಇದ್ದದ್ದು ಕಂಡ: 4 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದಾಕೆಯ ಕತ್ತು ಹಿಸುಕಿ ಕೊಂದ!
ಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಇಬ್ಬರೊಟ್ಟಿಗೆ ತನ್ನ ಪತ್ನಿ ಹಾಸಿಗೆಯಲ್ಲಿ ಇದ್ದದ್ದು ಕಂಡ: 4 ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದಾಕೆಯ ಕತ್ತು ಹಿಸುಕಿ ಕೊಂದ!

Share
Share

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಯುವಕನೊಬ್ಬ ತನ್ನ ಪತ್ನಿ ಮೂವರು ಪುರುಷರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆಕ್ರೋಶಗೊಂಡು ಕೊಲೆ ಮಾಡಿದ ಘಟನೆ ನಡೆದಿದೆ.

ಪ್ರೀತಿಸಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತದೇಹವನ್ನು ಕಂಬಳಿಯಲ್ಲಿ ಸುತ್ತಿ ಎಸೆದಿದ್ದ ಮರುದಿನವೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಆರೋಪಿ ಸಚಿನ್ ಸಿಂಗ್ ಕಳೆದ ಒಂದು ತಿಂಗಳಿನಿಂದ ತನ್ನ ಪತ್ನಿ ಶ್ವೇತಾ ಸಿಂಗ್ ಜೊತೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗಿ, ನ್ಯಾಯಾಲಯದಲ್ಲಿ ತಮ್ಮ ಮದುವೆಯನ್ನು ನೋಂದಾಯಿಸಿದ್ದರು.

ಸಚಿನ್ ಪೊಲೀಸರಿಗೆ ನೀಡಿದ ಹೇಳಿಕೆಯ ಪ್ರಕಾರ, ತನ್ನ ಹೆಂಡತಿಯ ನಡವಳಿಕೆಯ ಬಗ್ಗೆ ಅನುಮಾನ ಮೂಡಿತ್ತು. ತಾನು ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ, ಮಹಾರಾಜಪುರದ ಎಂಜಿನಿಯರಿಂಗ್ ಕಾಲೇಜಿನ ಬಳಿ ಪಕ್ಕದ ಕೋಣೆಗಳಲ್ಲಿ ವಾಸಿಸುತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಆಕೆ ಸಂಬಂಧ ಬೆಳೆಸಿಕೊಂಡಿದ್ದಳು ಎಂದು ಆತ ಆರೋಪಿಸಿದ್ದಾನೆ.

ಎರಡು ದಿನಗಳ ಹಿಂದೆ ತನ್ನ ಪತ್ನಿಗೆ ತಾನು ಹಳ್ಳಿಗೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿದ್ದಾಗಿಯೂ, ಆ ರಾತ್ರಿ ಹಿಂತಿರುಗಲಿಲ್ಲವೆಂದು ಸಚಿನ್ ಪೊಲೀಸರಿಗೆ ತಿಳಿಸಿದ್ದಾನೆ. ಆದರೆ, ಶುಕ್ರವಾರ ರಾತ್ರಿ ಅನಿರೀಕ್ಷಿತವಾಗಿ ಹಿಂತಿರುಗಿ ತನ್ನ ಪತ್ನಿ ಇಬ್ಬರು ಪುರುಷರೊಂದಿಗೆ ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಿದ್ದಾಗಿ ಹೇಳಿಕೊಂಡಿದ್ದಾನೆ. ತನ್ನ ಮೊಬೈಲ್ ಫೋನ್‌ನಲ್ಲಿ ವೀಡಿಯೊ ರೆಕಾರ್ಡ್ ಮಾಡಲು ಪ್ರಾರಂಭಿಸಿದೆ, ನಂತರ ತನ್ನ ಪತ್ನಿ ಆ ವ್ಯಕ್ತಿಗಳನ್ನು ತನ್ನ ಮೇಲೆ ಹಲ್ಲೆ ಮಾಡಲು ಪ್ರಚೋದಿಸಿದ್ದಾಳೆ ಎಂದು ಹೇಳಿಕೊಂಡಿದ್ದಾನೆ. ಪೊಲೀಸರು ಜಾಗೃತರಾಗಿ ಸ್ಥಳಕ್ಕೆ ತಲುಪಿ, ಘಟನೆಯಲ್ಲಿ ಭಾಗಿಯಾಗಿದ್ದ ಎಲ್ಲರನ್ನೂ ಪೊಲೀಸ್ ಠಾಣೆಗೆ ಕರೆದೊಯ್ದರು.

ಪೊಲೀಸ್ ಠಾಣೆಯಲ್ಲಿ, ಸಚಿನ್ ಅಧಿಕಾರಿಗಳ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟಿದ್ದಾನೆ. ಪತ್ನಿ ಇಬ್ಬರು ಪುರುಷರಿಗೆ ಏನೂ ಮಾಡಬೇಡಿ ಎಂದಳು. ಇಲ್ಲದಿದ್ದರೆ ನಿನ್ನನ್ನೇ ಬಿಟ್ಟು ಅವರೊಂದಿಗೆ ಪ್ರತ್ಯೇಕವಾಗಿ ಬದುಕುತ್ತೇನೆ ಎಂದಾಗ ಜಗಳ ವಿಕೋಪಕ್ಕೆ ತಿರುಗಿತು. ಆಗ ಇಬ್ಬರು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಿದ್ದಾನೆ.

ಕೋಪದ ಭರದಲ್ಲಿ, ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದೆ ಎಂದು ಸಚಿನ್ ಹೇಳಿದ್ದಾರೆ. ಆಕೆಯ ದೇಹವನ್ನು ಕಂಬಳಿಯಲ್ಲಿ ಸುತ್ತಿ ಮನೆಯಲ್ಲೇ ಬಿಟ್ಟೆ. ಮರುದಿನ, ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.

ಪೊಲೀಸ್ ಅಧಿಕಾರಿಗಳು ಅವರೊಂದಿಗೆ ಮನೆಗೆ ಹೋದಾಗ ಶ್ವೇತಾ ಮೃತದೇಹವು ಕಂಬಳಿಯಲ್ಲಿ ಸುತ್ತಿರುವುದು ಕಂಡುಬಂದಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಆರಂಭಿಸಲಾಗಿದೆ. ಶವದ ಪ್ರಾಥಮಿಕ ಪರೀಕ್ಷೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು.

Share

Leave a comment

Leave a Reply

Your email address will not be published. Required fields are marked *