ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕರಾಮುವಿವಿ ಪ್ರವೇಶಾತಿಗೆ ಅರ್ಜಿ ಆಹ್ವಾನ: ಆನ್ ಲೈನ್ ನಲ್ಲಿ ಸಲ್ಲಿಸಿ ಅರ್ಜಿ

On: March 10, 2025 6:09 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-03-2025

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ,. ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಲಿಬ್.ಐ.ಎಸ್ಸಿ., ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣಕ್ರಮಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಆನ್‌ಲೈನ್ ಮೂಲಕ ಪ್ರವೇಶಾತಿ ನೀಡಲಾಗುತ್ತಿದೆ.

ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಲಭ್ಯವಿರುವ ಪ್ರಾಸ್‌ಪೆಕ್ಟಸ್‌ನಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣಕ್ರಮಗಳಿಗೆ
ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ ಎಕ್ಸ್ಸರ್ವೀಸ್‌ಮನ್ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಡ್ರೈವರ್ಸ್ ಮತ್ತು ಕೆ.ಎಸ್.ಆರ್.ಟಿ.ಸಿ ನೌಕರರಿಗೆ ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ.10 ರಷ್ಟು ವಿಶೇಷ ರಿಯಾಯಿತಿ ಇದೆ.

ಕೋವಿಡ್‌ನಿಂದಾಗಿ ಮೃತ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ತೃತಿಯ ಲಿಂಗಗಳಿಗೆ ಪೂರ್ಣಶುಲ್ಕ ವಿನಾಯಿತಿ ಇದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದು.

ಮಾ.31 ಕೊನೆಯ ದಿನವಾಗಿದೆ. ಕರಾಮುವಿಯ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪ್ರಕ್ರಿಯೆಯು ಸಾರ್ವತ್ರಿಕ ರಾಜಾ ದಿನಗಳಾದ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಂದು ಪ್ರವೇಶಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವಾಗ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ 8800335638, 8690544544 ಗೆ ಸಂಪರ್ಕಿಸಬಹುದು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment