SUDDIKSHANA KANNADA NEWS/ DAVANAGERE/ DATE:02-04-2025
ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ 2024-25 ನೇ ಜನವರಿ ಆವೃತ್ತಿಯ ದ್ವಿತೀಯ ಮತ್ತು ತೃತೀಯ ವರ್ಷಕ್ಕೆ ಪ್ರವೇಶಾತಿ ನವೀಕರಣ ಮಾಡಿಕೊಳ್ಳಲು ಬೋಧನಾ ಶುಲ್ಕ ಪಾವತಿಸಲು ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ ಮತ್ತು ಅಂತಿಮ ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಪದವಿಗಳ ಬೋಧನಾ ಶುಲ್ಕ ಪಾವತಿಸಲು ರೂ.400/- ದಂಡ ಶುಲ್ಕದೊಂದಿಗೆ ಏ.15 ರವರೆಗೆ ವಿಸ್ತರಿಸಲಾಗಿದೆ ಎಂದು ಕರಾಮುವಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ಎಚ್.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಮಾಹಿತಿಗೆ ಕರಾಮುವಿ ವೆಬ್ಸೈಟ್ www.ksoumysuru.ac.in ನ್ನು ವೀಕ್ಷಿಸುವುದು.
ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ, ನಲ್ಲಚೆರವು ಪ್ರದೇಶ, ಬಳ್ಳಾರಿ ಅಥವಾ ಮೊ.7892597159 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.