Site icon Kannada News-suddikshana

ಶಿರೂರು ಭೂ ಕುಸಿತ : ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ!

ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು.ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

Exit mobile version