ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಸಲುವಾಗಿ ಪ್ರಸ್ತುತ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಮೊದಲ ಹಂತದ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಉರ್ದು ಸೇರಿದಂತೆ ಇತರ ಅಲ್ಪಸಂಖ್ಯಾತ ಭಾಷೆಗಳು ಹಾಗೂ ಕೆಲ ಪ್ರಮುಖ ವಿಷಯಗಳ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸದಿರುವ ಕುರಿತು ವಿಧಾನ ಪರಿಷತ್ತಿನಲ್ಲಿ ಗಮನ ಸೆಳೆಯುವ ಸೂಚನೆ ಮಂಡನೆಯಾಗಿತ್ತು. ಈ ಕುರಿತು ಶಾಸಕರ ಆಕ್ಷೇಪಣೆಗಳಿಗೆ ಉತ್ತರ ನೀಡಿದ ಸಚಿವರು, ವಿವಿಧ ತಾಂತ್ರಿಕ ಕಾರಣಗಳಿಂದ ನೇಮಕಾತಿ ವಿಳಂಬವಾಗಿದ್ದರಿಂದ ಸದ್ಯ ಲಭ್ಯವಿರುವ 15,000 ಹುದ್ದೆಗಳಿಗೆ ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದರು.
“ಶಿಕ್ಷಕರ ನೇಮಕಾತಿಯು 15 ಸಾವಿರಕ್ಕೆ ಸೀಮಿತವಾಗಿಲ್ಲ, ರಾಜ್ಯದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಸಂಪೂರ್ಣವಾಗಿ ನೀಗುವವರೆಗೆ ಈ ನೇಮಕಾತಿ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಉರ್ದು ಭಾಷಾ ಶಿಕ್ಷಕರು ಹಾಗೂ ಇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯಿಂದ ಪ್ರಸ್ತಾವನೆಯನ್ನು ಈಗಾಗಲೇ ಆರ್ಥಿಕ ಇಲಾಖೆಯ ಅನುಮೋದನೆಗೆ ಕಳುಹಿಸಿಕೊಡಲಾಗಿದೆ. ಆರ್ಥಿಕ ಇಲಾಖೆಯಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆಯೇ ಸಚಿವ ಸಂಪುಟದ (Cabinet) ಒಪ್ಪಿಗೆ ಪಡೆದು ಹೊಸ ನೇಮಕಾತಿ ಅಧಿಸೂಚನೆಯನ್ನು (Notification) ಹೊರಡಿಸಲಾಗುವುದು,” ಎಂದು ಸಚಿವರು ಭರವಸೆ ನೀಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದ್ದು, ಅವರು ನೇಮಕಾತಿಗೆ ಪೂರ್ಣ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದ ಸಚಿವರು, ಉರ್ದು ಭಾಷಾ ಶಿಕ್ಷಕರ ಹುದ್ದೆಗಳಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ ಎಂದಿದ್ದಾರೆ.
- 15000 Teachers Recruitment
- 15000 ಶಿಕ್ಷಕರ ನೇಮಕಾತಿ
- Karnataka education department
- Karnataka Teacher Recruitment
- Legislative Council Karnataka
- Madhu Bangarappa
- Siddaramaiah
- Urdu Teacher Recruitment
- ಉರ್ದು ಶಿಕ್ಷಕರ ನೇಮಕಾತಿ
- ಕರ್ನಾಟಕ ಶಿಕ್ಷಕರ ನೇಮಕಾತಿ
- ಮಧು ಬಂಗಾರಪ್ಪ
- ವಿಧಾನ ಪರಿಷತ್
- ವಿಧಾನ ಪರಿಷತ್Karnataka Teacher Recruitment
- ಸಿದ್ದರಾಮಯ್ಯ





Leave a comment