Site icon Kannada News-suddikshana

ರಾಜ್ಯದಲ್ಲಿ ಪಶುಸಂಗೋಪನಾ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವ್ಯಾಪ್ತಿಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ(Diploma in veterinary application) 2 ವರ್ಷ ಅವಧಿಯ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲೆಗಳ ಸಮೇತ ಈ ಲೇಖನದಲ್ಲಿ ವಿವರಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿ ಮಾಹಿತಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಒಟ್ಟು ಡಿಪ್ಲೋಮಾ ಕಾಲೇಜುಗಳ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.
last date for application-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2024

Education Qualification-ಅರ್ಜಿ ಸಲ್ಲಿಸಲು ವಿದ್ಯಾರ್ಹತೆ?

ಪಶುಸಂಗೋಪನಾ ಡಿಪ್ಲೋಮಾ ಪ್ರವೇಶಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯೋಂದಿಗೆ ಕನ್ನಡ ಒಂದು ವಿಷಯವನ್ನು ಕಡ್ಡಾಯವಾಗಿ ಓದಿ ಕನಿಷ್ಟ ಶೇ 45 ರಷ್ಟ ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.

ಮತ್ತು ಅರ್ಜಿದಾರ ಅಭ್ಯರ್ಥಿಯು ಕಡ್ಡಾಯವಾಗಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 20 ವರ್ಷ ಮೀರಿರಬಾರದು.

Monthly stipend-ಪ್ರತಿ ತಿಂಗಳು ರೂ 1,000 ಶಿಷ್ಯವೇತನ:

ಈ ಕೋರ್ಸಗೆ ಪ್ರವೇಶ ಪಡೆದು ಎಲ್ಲಾ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ 1,000/- ಶಿಷ್ಯವೇತನವನ್ನು ವ್ಯಾಸಂಗದ ಅವಧಿಯಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Required Documents for application-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

SSLC ಅಂಕಪಟ್ಟಿ.

10 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡಿದ “ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ”

ಮೀಸಲಾತಿ ಬಯಸುವ ಅಭ್ಯರ್ಥಿಯು ಸಂಬಂಧಪಟ್ಟ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ 50% ರಷ್ಟು ಸೀಟುಗಳನ್ನು ಮೀಸಲಿಡಲಾಗಿದ್ದು, ಅಭ್ಯರ್ಥಿಗಳು ಈ ಕೋಟಾದಡಿ ಪ್ರವೇಶ ಬಯಸಿದ್ದಲ್ಲಿ ವ್ಯವಸಾಯಗಾರರ ಪ್ರಮಾಣ ಪತ್ರ ಸಲ್ಲಿಸಬೇಕು.

Online application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್: Apply Now

Diploma in veterinary admission-ಪ್ರವೇಶ ವಿಧಾನ:

ಈ ಕೋರ್ಸಿಗೆ ಪ್ರವೇಶವನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೇರೆಗೆ ಸರಕಾರದ ಮೀಸಲಾತಿ ಆದೇಶದಂತೆ ಹಾಗೂ ಮೆರಿಟ್ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ.
Diploma in veterinary seat details-ಲಭ್ಯವಿರುವ ಒಟ್ಟು ಸೀಟುಗಳ ವಿವರ ಹೀಗಿದೆ:

ಪಶುಸಂಗೋಪನಾ ಪಾಲಿಟೆಕ್ನಿಕ್ ಜಾನುವಾರು ಸಂಶೋಧನಾ ಹಾಗೂ ಮಾಹಿತಿ ಕೇಂದ್ರ, ಕೊನೆಹಳ್ಳಿ, ತಿಪಟೂರ ತಾಲ್ಲೂಕು ತುಮಕೂರು ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್ ಕುನ್ನೂರು, ಶಿಗ್ಗಾಂವ, ಹಾವೇರಿ ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್ ಕೊರವಂಗಲ ಕ್ರಾಸ್ ಹಾಸನ ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್ ಬರ್ಗಿ, ಗುಂಡ್ಲುಪೇಟೆ ತಾಲ್ಲೂಕು, ಚಾಮರಾಜನಗರ ಜಿಲ್ಲೆ- 50 ಸೀಟು

ಪಶುಸಂಗೋಪನಾ ಪಾಲಿಟೆಕ್ನಿಕ್ ಡೋರಳ್ಳಿ, ಶಾಹಪೂರ ತಾಲ್ಲೂಕು, ಯಾದಗಿರಿ ಜಿಲ್ಲೆ.- 50 ಸೀಟು

ಇನ್ನು ಹೆಚ್ಚಿನ ಮಾಹಿತಿಗಾಗಿ:

ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಲು ಲಿಂಕ್: Download Now
ಅರ್ಜಿ ಸಲ್ಲಿಸಲು ಲಿಂಕ್: Apply Now
ಅಧಿಕೃತ ವೆಬ್ಸೈಟ್ ಲಿಂಕ್: Click here

Exit mobile version