Home ದಾವಣಗೆರೆ ಸಾಂದೀಪನಿ ಶಿಷ್ಯವೇತನ: ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಿಗಲಿದೆ ವಾರ್ಷಿಕ 15,000 ರೂ. ನಿರ್ವಹಣಾ ವೆಚ್ಚ!
ದಾವಣಗೆರೆನವದೆಹಲಿಬೆಂಗಳೂರು

ಸಾಂದೀಪನಿ ಶಿಷ್ಯವೇತನ: ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸಿಗಲಿದೆ ವಾರ್ಷಿಕ 15,000 ರೂ. ನಿರ್ವಹಣಾ ವೆಚ್ಚ!

Share
ಸಾಂದೀಪನಿ
Share

ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ಬ್ರಾಹ್ಮಣ ಅಭಿವೃದ್ದಿ ಮಂಡಳಿವತಿಯಿಂದ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್‍ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗಳಿಗೆ ವಾರ್ಷಿ ನಿರ್ವಹಣಾ ವೆಚ್ಚ ರೂ.15000/-ದಂತೆ ಶಿಷ್ಯವೇತನ ಪಾವತಿಸಲಾಗುವುದು.

ಈ ಯೋಜನೆಯ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ಅಥವಾ ಅರ್ಜಿ ಸಲ್ಲಿಸಲು ಕೆಳಗಿನ ಅಧಿಕೃತ ಸಂಪರ್ಕಗಳನ್ನು ಬಳಸಬಹುದು:

ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2-3 ಭಾಗದ ಮೊತ್ತವನ್ನು ಮೆಉಪಾವತಿ ಮಾಡಲಾಗುವುದು.

ಅರ್ಜಿದಾರರು ಆನ್‍ಲೈನ್ www.ksbdb.karnataka.gov.in ನಲ್ಲಿ ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8023605888, 8762249230 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ಬಸವರಾಜ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *