Home ದಾವಣಗೆರೆ ಬಂಜಾರ ಸಮಾಜದ ಏಕೈಕೆ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಿ: ಕವಿತಾ ಚಂದ್ರಶೇಖರ್ ಆಗ್ರಹ
ದಾವಣಗೆರೆನವದೆಹಲಿಬೆಂಗಳೂರು

ಬಂಜಾರ ಸಮಾಜದ ಏಕೈಕೆ ಶಾಸಕ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಿ: ಕವಿತಾ ಚಂದ್ರಶೇಖರ್ ಆಗ್ರಹ

Share
ಬಂಜಾರ
Share

ದಾವಣಗೆರೆ: ಹಾವೇರಿ ಹಾಗೂ ಬ್ಯಾಡಗಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿವ ರುದ್ರಪ್ಪ ಲಮಾಣಿ ಅವರಿಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಮಹಿಳಾ ಘಟಕದ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ನಾಯಕಿ ಕವಿತಾ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಬಂಜಾರ ಸಮಾಜದಿಂದ ಕಾಂಗ್ರೆಸ್ ಪಕ್ಷದಲ್ಲಿ ಗೆದ್ದು ಬಂದಿರುವ ಏಕೈಕ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಈ ಮೂಲಕ ರಾಜ್ಯದ ಬಂಜಾರ ಸಮುದಾಯದ ಹಿತ ಕಾಪಾಡಲು, ಸಮಸ್ಯೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಧ್ವನಿ ಎತ್ತಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರುದ್ರಪ್ಪ ಲಮಾಣಿ ಅವರು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಮುಜರಾಯಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರೂ ವಿಧಾನಸಭೆ ಉಪ ಸಭಾಧ್ಯಕ್ಷರನ್ನಾಗಿ ನೇಮಿಸಿತ್ತು. ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಚನೆಯಾದಾಗ ಬಂಜಾರ ಜನಾಂಗಕ್ಕೆ ಸಚಿವ ಸ್ಥಾನವನ್ನು ಕೋಡುತ್ತೇವೆಂದು ಭರವಸೆ ನೀಡಲಾಗಿತ್ತು. ಅನಿವಾರ್ಯ ಕಾರಣಗಳಿಂದ ಸಚಿವ ಸ್ಥಾನ ಕೊಟ್ಟಿಲ್ಲ. ಇದರಿಂದ ಸಮಸ್ತ ಬಂಜಾರ ಸಮಾಜಕ್ಕೆ ಅನ್ಯಾಯವಾಗಿದೆ. ಕಳೆದ ವರ್ಷ ನಡೆದ ಶಿಗ್ಗಾಂವ, ದಾವಣಗೆರೆ, ಬಾಗಲಕೋಟೆಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಂಜಾರ ಸಮಾಜದವರು ಹೆಚ್ಚು ಮತಗಳನ್ನು ನೀಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಹಾಗಾಗಿ, ಕಾಂಗ್ರೆಸ್ ಹೈಕಮಾಂಡ್ ನಾಯಕರು ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳಿದ್ದಾರೆ.

ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ವಿಧಾನಸಭೆ ಉಪಸಭಾಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಸಮಾಜದ ಬೇಡಿಕೆಗಳ ಈಡೇರಿಕೆಗೆ ಸಮಾಜದ ಪ್ರತಿನಿಧಿಯಾಗಿ ರುದ್ರಪ್ಪ ಲಮಾಣಿ ಅವರಿಗೆ ಅವಕಾಶ ನೀಡಿದರೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಜಾರ ಸಮುದಾಯದ ಮತಗಳು ಬರುವಂತೆ ಮಾಡುವ ಶಕ್ತಿ ಅವರಲ್ಲಿದೆ. ಈ ಬಾರಿ ಒಳ್ಳೆಯ ಖಾತೆ ನೀಡಿ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಅವಕಾಶ ನೀಡಬೇಕು ಎಂದು ಕವಿತಾ ಚಂದ್ರಶೇಖರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles