Home ದಾವಣಗೆರೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಾಯಕರ ಆಕ್ರೋಶ: ಕೈ ಶಾಸಕರ ಅಸಮಾಧಾನ ಶಮನಕ್ಕೆ KPCC ಅಧ್ಯಕ್ಷರ ಬಿಗ್ ಮಾಸ್ಟರ್ ಪ್ಲಾನ್!
ದಾವಣಗೆರೆನವದೆಹಲಿಬೆಂಗಳೂರು

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನಾಯಕರ ಆಕ್ರೋಶ: ಕೈ ಶಾಸಕರ ಅಸಮಾಧಾನ ಶಮನಕ್ಕೆ KPCC ಅಧ್ಯಕ್ಷರ ಬಿಗ್ ಮಾಸ್ಟರ್ ಪ್ಲಾನ್!

Share
ಶಾಸಕ
Share

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಸಚಿವ ಸ್ಥಾನ ಲಭಿಸದೆ ಅಸಮಾಧಾನಗೊಂಡಿರುವ ಶಾಸಕರ ನೋವು ಹಾಗೂ ಆಕ್ರೋಶಕ್ಕೆ KPCC ಅಧ್ಯಕ್ಷರು ಸ್ಪಂದಿಸಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ವಹಿಸಿಕೊಳ್ಳುವ ಆಸೆಯಿರುವುದು ಸಹಜ. ನಾಯಕರ ಈ ಭಾವನೆಗಳನ್ನು ಕಾಂಗ್ರೆಸ್ ಪಕ್ಷ ಎಂದಿಗೂ ನಿರ್ಲಕ್ಷಿಸುವುದಿಲ್ಲ; ಪ್ರತಿಯೊಬ್ಬರ ಸೇವೆ, ಅನುಭವ ಹಾಗೂ ಕೊಡುಗೆಯನ್ನು ಗೌರವದಿಂದಲೇ ಪರಿಗಣಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಂಪುಟದಲ್ಲಿ ಸ್ಥಾನಗಳ ಸಂಖ್ಯೆ ಸೀಮಿತವಾಗಿರುತ್ತದೆ. ಪ್ರಾದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ವಿವಿಧ ಸಮುದಾಯಗಳ ಪ್ರಾತಿನಿಧ್ಯ, ಅನುಭವ ಹಾಗೂ ಆಡಳಿತಾತ್ಮಕ ಅಗತ್ಯಗಳನ್ನು ಪರಿಶೀಲಿಸಿ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕತ್ವ ಜಂಟಿಯಾಗಿ ಈ ತೀರ್ಮಾನ ಕೈಗೊಂಡಿದೆ.

“ಸಚಿವ ಸ್ಥಾನ ಸಿಗದಿರುವುದು ಯಾರೊಬ್ಬರ ರಾಜಕೀಯ ಸೇವೆಯ ನಿರಾಕರಣೆಯೂ ಅಲ್ಲ, ಅವರ ಸಾಮರ್ಥ್ಯದ ಮೇಲಿನ ಅನುಮಾನವೂ ಅಲ್ಲ. ಅಧಿಕಾರವೇ ಪಕ್ಷ ಸೇವೆಯ ಏಕೈಕ ಮಾನದಂಡವಲ್ಲ. ಸರ್ಕಾರದ ಒಳಗೆ, ಪಕ್ಷದ ಸಂಘಟನೆಯಲ್ಲಿ ಮತ್ತು ವಿವಿಧ ಜವಾಬ್ದಾರಿಗಳ ಮೂಲಕ ಜನಸೇವೆ ಮಾಡಲು ಹಲವು ಅವಕಾಶಗಳಿವೆ.”

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆಯಂತಹ ನಿರ್ಧಾರಗಳನ್ನು ಕೈಗೊಳ್ಳಬೇಡಿ ಎಂದು ಅಸಮಾಧಾನಿತ ಶಾಸಕರಲ್ಲಿ ಮನವಿ ಮಾಡಿರುವ ಅವರು, ಶೀಘ್ರದಲ್ಲೇ ವೈಯಕ್ತಿಕವಾಗಿ ಮಾತನಾಡಿ ಅವರ ಅಭಿಪ್ರಾಯಗಳನ್ನು ಪಕ್ಷದ ಹೈಕಮಾಂಡ್ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

ಹೊಸದಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಪಕ್ಷದ ನಿಷ್ಠಾವಂತರು ಮತ್ತು ಸಮರ್ಥರಾಗಿದ್ದು, ಅವರ ಆಯ್ಕೆಯನ್ನು ಎಲ್ಲರೂ ಗೌರವಿಸಿ ಸರ್ಕಾರದ ಯಶಸ್ಸಿಗೆ ಸಹಕರಿಸಬೇಕು. ವೈಯಕ್ತಿಕ ಆಕಾಂಕ್ಷೆಗಳಿಗಿಂತ ಪಕ್ಷದ ಹಿತ, ಸರ್ಕಾರದ ಸ್ಥಿರತೆ ಮತ್ತು ಕರ್ನಾಟಕದ ಜನರ ನಿರೀಕ್ಷೆಗಳು ಮುಖ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles