ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ (KFD) ಖಾಲಿ ಇರುವ ಒಟ್ಟು 450 ಬೀಟ್ ಫಾರೆಸ್ಟರ್ (Beat Forester – ಗ್ರೂಪ್ ಸಿ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 22, 2026 ಕೊನೆಯ ದಿನವಾಗಿದೆ.
ಈ ನೇಮಕಾತಿಯಡಿಯಲ್ಲಿ ಒಟ್ಟು 450 ಹುದ್ದೆಗಳಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ರವರೆಗೆ ವೇಶ್ರೇಣಿ ದೊರೆಯಲಿದೆ. ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಪಟುತ್ವ ಪರೀಕ್ಷೆಯ (Physical Efficiency & Endurance Test) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ (12th / PUC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಸರ್ಕಾರದ ನಿಯಮಾನುಸಾರ ಎಸ್ಸಿ, ಎಸ್ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ. 750, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ರೂ. 500 ಹಾಗೂ ಮಾಜಿ ಸೈನಿಕರು/ಅಂಗವಿಕಲರಿಗೆ ರೂ. 250 ಆನ್ಲೈನ್ ಅರ್ಜಿ ಶುಲ್ಕವಿರುತ್ತದೆ.
ಅಧಿಕೃತ ವೆಬ್ಸೈಟ್: ಆಸಕ್ತರು aranya.gov.in ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 23, 2026
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 22, 2026
ಶುಲ್ಕ ಪಾವತಿಸಲು ಕೊನೆಯ ದಿನ: ಡಿಸೆಂಬರ್ 23, 2026




