Home ಉದ್ಯೋಗ ವಾರ್ತೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ: ಪಿಯುಸಿ ಪಾಸ್ ಆದವರಿಗೆ ಅರಣ್ಯ ಇಲಾಖೆಯಲ್ಲಿ ಭರ್ಜರಿ ಅವಕಾಶ; ಮಾಸಿಕ ವೇತನ ರೂ. 76,100
ಉದ್ಯೋಗ ವಾರ್ತೆದಾವಣಗೆರೆನವದೆಹಲಿಬೆಂಗಳೂರು

ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ: ಪಿಯುಸಿ ಪಾಸ್ ಆದವರಿಗೆ ಅರಣ್ಯ ಇಲಾಖೆಯಲ್ಲಿ ಭರ್ಜರಿ ಅವಕಾಶ; ಮಾಸಿಕ ವೇತನ ರೂ. 76,100

Share
ಅರಣ್ಯ ಇಲಾಖೆ
Share

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ (KFD) ಖಾಲಿ ಇರುವ ಒಟ್ಟು 450 ಬೀಟ್ ಫಾರೆಸ್ಟರ್ (Beat Forester – ಗ್ರೂಪ್ ಸಿ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 22, 2026 ಕೊನೆಯ ದಿನವಾಗಿದೆ.

ಈ ನೇಮಕಾತಿಯಡಿಯಲ್ಲಿ ಒಟ್ಟು 450 ಹುದ್ದೆಗಳಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 76,100 ರವರೆಗೆ ವೇಶ್ರೇಣಿ ದೊರೆಯಲಿದೆ. ದೈಹಿಕ ಸಾಮರ್ಥ್ಯ ಮತ್ತು ದೈಹಿಕ ಪಟುತ್ವ ಪರೀಕ್ಷೆಯ (Physical Efficiency & Endurance Test) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ (12th / PUC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ: ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 32 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಸರ್ಕಾರದ ನಿಯಮಾನುಸಾರ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ. 750, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ. 500 ಹಾಗೂ ಮಾಜಿ ಸೈನಿಕರು/ಅಂಗವಿಕಲರಿಗೆ ರೂ. 250 ಆನ್‌ಲೈನ್ ಅರ್ಜಿ ಶುಲ್ಕವಿರುತ್ತದೆ.

ಅಧಿಕೃತ ವೆಬ್‌ಸೈಟ್: ಆಸಕ್ತರು aranya.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ: ನವೆಂಬರ್ 23, 2026

ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 22, 2026

ಶುಲ್ಕ ಪಾವತಿಸಲು ಕೊನೆಯ ದಿನ: ಡಿಸೆಂಬರ್ 23, 2026

Share
Related Articles