Home ದಾವಣಗೆರೆ ಭದ್ರಾ ಅಚ್ಚುಕಟ್ಟು ರೈತರಿಗೆ ಸಿಹಿ ಸುದ್ದಿ: ಸೋಮವಾರದಿಂದ 10 ದಿನಗಳವರೆಗೆ ಭದ್ರಾ ಡ್ಯಾಂನಿಂದ ಭದ್ರಾ ಎಡ ಮತ್ತು ಬಲ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಆದೇಶ!
ದಾವಣಗೆರೆಬೆಂಗಳೂರು

ಭದ್ರಾ ಅಚ್ಚುಕಟ್ಟು ರೈತರಿಗೆ ಸಿಹಿ ಸುದ್ದಿ: ಸೋಮವಾರದಿಂದ 10 ದಿನಗಳವರೆಗೆ ಭದ್ರಾ ಡ್ಯಾಂನಿಂದ ಭದ್ರಾ ಎಡ ಮತ್ತು ಬಲ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಆದೇಶ!

Share
ಭದ್ರಾ
Share

ಶಿವಮೊಗ್ಗ/ದಾವಣಗೆರೆ: ಮಳೆಯ ಕೊರತೆಯಿಂದಾಗಿ ನೀರಿಲ್ಲದೆ ಒಣಗುತ್ತಿದ್ದ ಭದ್ರಾ ಅಚ್ಚುಕಟ್ಟು ಪ್ರದೇಶದ ಬೆಳೆಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸೋಮವಾರ (ನವೆಂಬರ್ 16) ದಿಂದ ಸತತ 10 ದಿನಗಳ ಕಾಲ ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲು ಆದೇಶಿಸಿದೆ ಎಂದು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಭದ್ರಾ ನಾಲಾ ವ್ಯಾಪ್ತಿಯ ರೈತರು ತೀವ್ರ ನೀರಿನ ಅಭಾವ ಎದುರಿಸುತ್ತಿದ್ದರು. ನಿಂತಿರುವ ಬೆಳೆಗಳಿಗೆ ತಕ್ಷಣ ನೀರು ಹರಿಸದಿದ್ದರೆ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂಬ ವಾಸ್ತವ ಸ್ಥಿತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡಲಾಗಿತ್ತು. ರೈತರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ನೀರು ಹರಿಸಲು ಅನುಮತಿ ನೀಡಿದೆ ಎಂದು ಹೇಳಿದ್ದಾರೆ.

ಒಟ್ಟು 2,000 ಕ್ಯೂಸೆಕ್ ನೀರು ಬಿಡುಗಡೆ: ಸರ್ಕಾರದ ಆದೇಶದಂತೆ ನಾಳೆಯಿಂದ 10 ದಿನಗಳ ಕಾಲ ಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ 500 ಕ್ಯೂಸೆಕ್ ಹಾಗೂ ಬಲದಂಡೆ ನಾಲೆಗೆ 1,500 ಕ್ಯೂಸೆಕ್ ಸೇರಿದಂತೆ ಒಟ್ಟು 2,000 ಕ್ಯೂಸೆಕ್ ನೀರನ್ನು ಹರಿಸಲಾಗುತ್ತದೆ.

ಬೆಳೆ ರಕ್ಷಣೆಗೆ ತುರ್ತು ಕ್ರಮ: ಮಳೆ ಕೊರತೆಯಿಂದ ಸಂಕಷ್ಟದಲ್ಲಿದ್ದ ಭದ್ರಾ ಅಚ್ಚುಕಟ್ಟು ಭಾಗದ ರೈತರ ಬೆಳೆಗಳಿಗೆ ಈ 10 ದಿನಗಳ ನೀರು ಪೂರೈಕೆಯು ದೊಡ್ಡ ಮಟ್ಟದ ಆಸರೆಯಾಗಲಿದೆ.

ಸಚಿವರ ಸ್ಪಂದನೆಗೆ ಮೆಚ್ಚುಗೆ: ಕ್ಷೇತ್ರದ ಹಾಗೂ ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸಿ ನೀರು ಬಿಡುಗಡೆಗೆ ಆದೇಶ ಹೊರಡಿಸಿದ ಮುಖ್ಯಮಂತ್ರಿಗಳು ಮತ್ತು ಸಚಿವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಕೃತಜ್ಞತೆ ಸಲ್ಲಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles