SUDDIKSHANA KANNADA NEWS/ DAVANAGERE/ DATE:13-02-2025
ಬೆಂಗಳೂರು: ಭಾರತದ ವಾರ್ಷಿಕ ರಫ್ತು ಮೊತ್ತ ₹70 ಲಕ್ಷ ಕೋಟಿಯ ಗುರಿ ಮುಟ್ಟಿದೆ. ಅದರಲ್ಲಿ ಕರ್ನಾಟಕದ್ದೇ ಸಿಂಹಪಾಲು.
ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಕರ್ನಾಟಕಕ್ಕೆ ಬಂಡವಾಳ ಆಕರ್ಷಣೆ, ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ನೆರವನ್ನು ಕೇಂದ್ರ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ರಾಜ್ಯದ ಕೈಗಾರಿಕಾ ನೀತಿಗಳು ಉದ್ಯಮಸ್ನೇಹಿಯಾಗಿದ್ದು, ಇತರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವರಾದ ಪೀಯೂಷ್ ಗೋಯಲ್ ಅವರು ಪ್ರಶಂಸಿಸಿದ್ದಾರೆ.