Site icon Kannada News-suddikshana

KARNATAKA JOB ALERT ಗುಡ್ ನ್ಯೂಸ್ : ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ 1,000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕ..!

ಬೆಂಗಳೂರು: ಶೀಘ್ರದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್‌ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.

Exit mobile version