Home ದಾವಣಗೆರೆ ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಕನಸೇ? ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಬೃಹತ್ ‘ವಿದೇಶಿ ಶಿಕ್ಷಣ ಮೇಳ’!
ದಾವಣಗೆರೆನವದೆಹಲಿಬೆಂಗಳೂರು

ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಕನಸೇ? ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಬೃಹತ್ ‘ವಿದೇಶಿ ಶಿಕ್ಷಣ ಮೇಳ’!

Share
ವಿದೇಶ
Share

ದಾವಣಗೆರೆ: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮವು (KSEDC) ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ ‘ವಿದೇಶದಲ್ಲಿ ಅಧ್ಯಯನ-2026’ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದೆ.

ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರಾಂಡ್ (ಗೇಟ್ ನಂ.4) ಆವರಣದಲ್ಲಿ ಈ ಶೈಕ್ಷಣಿಕ ಮೇಳ ನಡೆಯಲಿದೆ.

75ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಭಾಗಿ

ಈ ಮೇಳದಲ್ಲಿ 10ಕ್ಕೂ ಹೆಚ್ಚು ದೇಶಗಳ 75ಕ್ಕೂ ಅಧಿಕ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿವೆ. ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಕೋರ್ಸ್‌ಗಳ ಆಯ್ಕೆ, ಪ್ರವೇಶ ಪ್ರಕ್ರಿಯೆ, ಸ್ಟೂಡೆಂಟ್ ವೀಸಾ (Student Visa) ಮಾರ್ಗದರ್ಶನ ಹಾಗೂ ಲಭ್ಯವಿರುವ ವಿದ್ಯಾರ್ಥಿವೇತನಗಳ (Scholarships) ಬಗ್ಗೆ ಸಮಗ್ರ ಮಾಹಿತಿಯನ್ನು ತಜ್ಞರು ನೀಡಲಿದ್ದಾರೆ.

ಸೆಪ್ಟೆಂಬರ್ 5 ನೋಂದಣಿಗೆ ಕೊನೆಯ ದಿನ

ಆಸಕ್ತ ವಿದ್ಯಾರ್ಥಿಗಳು ಸೆಪ್ಟೆಂಬರ್ 5 ರ ಒಳಗಾಗಿ ಅಧಿಕೃತ ವೆಬ್‌ಸೈಟ್ studyabroad.ksdckarnataka.com ಮೂಲಕ ಉಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜ ಬಿ. ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *