Home ದಾವಣಗೆರೆ ಸಿಜೆಐ ಗೆಟ್ ಔಟ್, ಮೋದಿ ಅಭ್ಯರ್ಥಿ ಇನ್, ಚುನಾವಣಾ ಆಯೋಗ ಸಂಪೂರ್ಣ ಕಬಂಧ ಬಾಹುಗಳ ವಶ: ಪ್ರಿಯಾಂಕ್ ಖರ್ಗೆ ಆಕ್ರೋಶ!
ದಾವಣಗೆರೆನವದೆಹಲಿಬೆಂಗಳೂರು

ಸಿಜೆಐ ಗೆಟ್ ಔಟ್, ಮೋದಿ ಅಭ್ಯರ್ಥಿ ಇನ್, ಚುನಾವಣಾ ಆಯೋಗ ಸಂಪೂರ್ಣ ಕಬಂಧ ಬಾಹುಗಳ ವಶ: ಪ್ರಿಯಾಂಕ್ ಖರ್ಗೆ ಆಕ್ರೋಶ!

Share
ಪ್ರಿಯಾಂಕ್ ಖರ್ಗೆ
Share

ಬೆಂಗಳೂರು: ಕೇಂದ್ರ ಸರ್ಕಾರವು 2023ರಲ್ಲಿ ಜಾರಿಗೆ ತಂದಿರುವ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ ಮತ್ತು ಭಾರತೀಯ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಉಲ್ಲೇಖಿಸಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟು, ಪ್ರಧಾನಮಂತ್ರಿಗಳ ನೇತೃತ್ವದ ಸಮಿತಿಯ ಮೂಲಕ ತಮ್ಮಿಷ್ಟದ ವ್ಯಕ್ತಿಯನ್ನು ನೇಮಿಸಿಕೊಳ್ಳಲು ಬಿಜೆಪಿ ಸರ್ಕಾರ ದಾರಿ ಮಾಡಿಕೊಂಡಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. 2023ರ ಹೊಸ ಕಾಯ್ದೆಯು ಸಿಇಸಿ ಮತ್ತು ಚುನಾವಣಾ ಆಯುಕ್ತರಿಗೆ ಸೇವೆಯ ಸಮಯದಲ್ಲಿ ಹಾಗೂ ನಿವೃತ್ತಿಯ ನಂತರವೂ ಯಾವುದೇ ಸಿವಿಲ್ ಅಥವಾ ಕ್ರಿಮಿನಲ್ ನಡಾವಳಿಗಳಿಂದ ಸಂಪೂರ್ಣ ವಿನಾಯಿತಿ ಮತ್ತು ರಕ್ಷಣೆ ನೀಡಿದೆ ಎಂದು ಆರೋಪಿಸಿದ್ದಾರೆ.

ಈ ರೀತಿಯ ಅಪರಿಮಿತ ಅಧಿಕಾರ ಮತ್ತು ರಕ್ಷಣೆಯನ್ನು ನೀಡುವ ಮೂಲಕ ಚುನಾವಣಾ ಆಯೋಗವನ್ನು ಬಿಜೆಪಿ ಸರ್ಕಾರದ ಕೈಗೊಂಬೆಯನ್ನಾಗಿ ಮಾಡಿಕೊಳ್ಳಲಾಗಿದೆ. ವಿರೋಧ ಪಕ್ಷಗಳ ದೂರುಗಳನ್ನು ನಿರ್ಲಕ್ಷಿಸುವುದು, ಮಾದರಿ ನೀತಿ ಸಂಹಿತೆ (MCC) ಉಲ್ಲಂಘನೆಗಳ ಬಗ್ಗೆ ಕಣ್ಣು ಮುಚ್ಚಿ ಕುಳಿತುಕೊಳ್ಳುವುದು, ಮತದಾರರ ಪಟ್ಟಿಯಿಂದ ಕಾನೂನುಬಾಹಿರವಾಗಿ ಹೆಸರುಗಳನ್ನು ತೆಗೆದುಹಾಕುವುದು ಮತ್ತು ವಿಪಕ್ಷಗಳ ವಿರುದ್ಧ ಮಾತ್ರ ಪಕ್ಷಪಾತದ ಕ್ರಮ ಕೈಗೊಳ್ಳುವ ಮೂಲಕ ಆಯೋಗವು ತನ್ನ ನಿಷ್ಪಕ್ಷಪಾತತೆಯನ್ನು ಕಳೆದುಕೊಂಡಿದೆ ಎಂದು ಅವರು ಆಪಾದಿಸಿದ್ದಾರೆ.

ಉಚಿತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕಾದರೆ ನೇಮಕಾತಿ ಪ್ರಕ್ರಿಯೆಯೂ ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ನಿಷ್ಪಕ್ಷಪಾತವಾಗಿರಬೇಕು. ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *