Home ಉದ್ಯೋಗ ವಾರ್ತೆ ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಜುಲೈ 8 ಕೊನೆಯ ದಿನ!
ಉದ್ಯೋಗ ವಾರ್ತೆದಾವಣಗೆರೆನವದೆಹಲಿಬೆಂಗಳೂರು

ಕರ್ನಾಟಕ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಜುಲೈ 8 ಕೊನೆಯ ದಿನ!

Share
ಪೊಲೀಸ್
Share

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಪಡೆಯ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿಸುದ್ದಿ ನೀಡಿದೆ. 2026 ರ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಯ ಆನ್‌ಲೈನ್ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಜುಲೈ 8, 2026 ರವರೆಗೆ ವಿಸ್ತರಿಸಲಾಗಿದೆ. ತಾಂತ್ರಿಕ ತೊಂದರೆ ಹಾಗೂ ಅಭ್ಯರ್ಥಿಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

READ ALSO THIS STORY: ಕರ್ನಾಟಕ ಪೊಲೀಸ್ ಕಾನ್‌ಸ್ಟೇಬಲ್ 3,991 ಹುದ್ದೆಗಳ ಭರ್ತಿ: ಅರ್ಜಿ ಸಲ್ಲಿಸಲು ಜುಲೈ 3 ಕೊನೆ ದಿನ, ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರ!

ಪ್ರಮುಖ ಮಾಹಿತಿ:

  • ಒಟ್ಟು ಹುದ್ದೆಗಳು: 3,395 ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್

  • ಅರ್ಜಿ ತಿದ್ದುಪಡಿ ಅವಧಿ (Correction Window): ಜುಲೈ 10 ರಿಂದ ಜುಲೈ 13, 2026

  • ಪರೀಕ್ಷಾ ದಿನಾಂಕ: ಆಗಸ್ಟ್ 12, 2026

  • ವಿದ್ಯಾರ್ಹತೆ: ಪಿಯುಸಿ (PUC) ಅಥವಾ 12ನೇ ತರಗತಿ ಪಾಸ್

ವಯೋಮಿತಿ ಹಾಗೂ ಅರ್ಜಿ ಶುಲ್ಕ:

ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 33 ವರ್ಷ, ಒಬಿಸಿ/ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 35 ವರ್ಷ ಹಾಗೂ ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳಿಗೆ 36 ವರ್ಷ ನಿಗದಿಪಡಿಸಲಾಗಿದೆ. ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 750 ರೂ. ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಇತರೆ ಮೀಸಲಾತಿ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವಿರುತ್ತದೆ. ಅರ್ಹ ಅಭ್ಯರ್ಥಿಗಳು ತಕ್ಷಣವೇ KEA ಅಧಿಕೃತ ವೆಬ್‌ಸೈಟ್ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Share

Leave a comment

Leave a Reply

Your email address will not be published. Required fields are marked *