Home ಕ್ರೈಂ ನ್ಯೂಸ್ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ‘ದಕ್ಷತಾ ಪದಕ’ ಗೌರವ: ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿ ಎಂದ್ರು ಪ್ರಿಯಾಂಕ್ ಖರ್ಗೆ!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ‘ದಕ್ಷತಾ ಪದಕ’ ಗೌರವ: ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿ ಎಂದ್ರು ಪ್ರಿಯಾಂಕ್ ಖರ್ಗೆ!

Share
ಪ್ರಿಯಾಂಕ್ ಖರ್ಗೆ
Share

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ವೃತ್ತಿಪರತೆ, ನಿಷ್ಠೆ ಮತ್ತು ತನಿಖಾ ಸಾಮರ್ಥ್ಯಕ್ಕೆ ಕೇಂದ್ರ ಸರ್ಕಾರದ ಮಹತ್ವದ ಪುರಸ್ಕಾರ ದೊರೆತಿದ್ದು, ಇದು ರಾಜ್ಯ ಪೊಲೀಸ್ ಪಡೆಗೆ ಹೆಮ್ಮೆಯ ವಿಷಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಯಾವುದೇ ಪ್ರಭಾವ ಅಥವಾ ಒತ್ತಡಕ್ಕೆ ಮಣಿಯದೆ ಸಮರ್ಥವಾಗಿ ನಡೆಸಿ, ನ್ಯಾಯಾಲಯದಲ್ಲಿ ಸಾಕ್ಷ್ಯಾಧಾರಗಳ ಮೂಲಕ ಆರೋಪ ಸಾಬೀತಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಸ್‌ಐಟಿ (SIT) ತಂಡದ ಅಧಿಕಾರಿಗಳು ಸೇರಿದಂತೆ ಕರ್ನಾಟಕದ ಒಟ್ಟು ಏಳು ಮಂದಿಗೆ 2026ನೇ ಸಾಲಿನ ಪ್ರತಿಷ್ಠಿತ ‘ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ’ ಲಭಿಸಿದೆ ಎಂದು ತಿಳಿಸಿದ್ದಾರೆ. 

ಈ ಪ್ರಕರಣದ ತನಿಖೆಯಲ್ಲಿ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸಿದ ಇನ್‌ಸ್ಪೆಕ್ಟರ್‌ ಶೋಭಾ ಎನ್., ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಕೆ. ರತ್ನಮ್ಮ ಮತ್ತು ಮುಖ್ಯ ಪೇದೆ ವೈ. ಬಾಲಕೃಷ್ಣ ಅವರಿಗೆ ಈ ಗೌರವ ಸಂದಿರುವುದು ಇಲಾಖೆಯ ಹೆಮ್ಮೆಯನ್ನು ಹೆಚ್ಚಿಸಿದೆ. ಒಟ್ಟಾರೆ ಕರ್ನಾಟಕದ ಆರು ಪೊಲೀಸ್ ಅಧಿಕಾರಿಗಳು ಹಾಗೂ ಒಬ್ಬ ವಿಧಿವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿ ಸೇರಿದಂತೆ ಒಟ್ಟು ಏಳು ಮಂದಿಗೆ ಈ ರಾಷ್ಟ್ರೀಯ ಮನ್ನಣೆ ದೊರೆತಿದೆ. ರಾಜಕೀಯ ಹಾಗೂ ಇತರ ಯಾವುದೇ ಪ್ರಭಾವಗಳಿಗೆ ಬಗ್ಗದೆ, ಕೇವಲ ಸಾಕ್ಷ್ಯಾಧಾರಗಳ ಆಧಾರದ ಮೇಲೆ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಿದ ತನಿಖಾ ತಂಡದ ಕಾರ್ಯವೈಖರಿಗೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಎಸ್‌ಐಟಿ ತನಿಖಾ ತಂಡಕ್ಕೆ ಗೌರವ: ಪ್ರಜ್ವಲ್ ರೇವಣ್ಣ ಪ್ರಕರಣದ ನಿಷ್ಠಾವಂತ ತನಿಖೆಗೆ ಎಸ್‌ಐಟಿ ಅಧಿಕಾರಿಗಳಾದ ಇನ್‌ಸ್ಪೆಕ್ಟರ್ ಶೋಭಾ ಎನ್., ಎಎಸ್ಐ ಕೆ. ರತ್ನಮ್ಮ ಹಾಗೂ ಹೆಡ್‌ಕಾನ್‌ಸ್ಟೇಬಲ್ ವೈ. ಬಾಲಕೃಷ್ಣ ಅವರಿಗೆ ಕೇಂದ್ರದ ಪದಕ.

ಒಟ್ಟು 7 ಮಂದಿಗೆ ಪುರಸ್ಕಾರ: ರಾಜ್ಯದ 6 ಪೊಲೀಸ್ ಅಧಿಕಾರಿಗಳು ಹಾಗೂ 1 ಎಫ್‌ಎಸ್‌ಎಲ್ (ವಿಧಿವಿಜ್ಞಾನ) ಅಧಿಕಾರಿಗೆ 2026ನೇ ಸಾಲಿನ ‘ಕೇಂದ್ರ ಗೃಹಮಂತ್ರಿ ದಕ್ಷತಾ ಪದಕ’ ಲಭಿಸಿದೆ.

ರಾಷ್ಟ್ರೀಯ ಮಟ್ಟದ ಮನ್ನಣೆ: ಯಾವುದೇ ಒತ್ತಡಗಳಿಗೆ ಮಣಿಯದೆ ಅತ್ಯುತ್ತಮ ತನಿಖೆ ಮತ್ತು ವೃತ್ತಿಪರತೆ ಮೆರೆದ ಕರ್ನಾಟಕ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಗೆ ಸಿಕ್ಕಿರುವ ದೊಡ್ಡ ಗೌರವ.

ಕರ್ನಾಟಕ ಪೊಲೀಸ್ ಇಲಾಖೆಯ ತನಿಖಾ ಕೌಶಲ ಮತ್ತು ಕರ್ತವ್ಯನಿಷ್ಠೆಗೆ ಈ ರಾಷ್ಟ್ರೀಯ ಪುರಸ್ಕಾರವು ಮತ್ತೊಮ್ಮೆ ಸಾಕ್ಷಿಯಾಗಿದೆ. ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯದ ಕೀರ್ತಿ ತಂದಿರುವ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ರಾಜ್ಯಾದ್ಯಂತ ಅಭಿನಂದನೆಗಳು ಹರಿದುಬರುತ್ತಿವೆ ಎಂದು ಹೇಳಿದ್ದಾರೆ.
Share

Leave a comment

Leave a Reply

Your email address will not be published. Required fields are marked *

Related Articles