Home ದಾವಣಗೆರೆ 4 ವರ್ಷ ಅಧಿಕಾರ ನಡೆಸಿದ್ರೂ ದಾವಣಗೆರೆ, ಬಾಗಲಕೋಟೆಗೆ ಕೊಡುಗೆ ನೀಡದ ಬಿಜೆಪಿ, ಅಪಪ್ರಚಾರಕ್ಕಷ್ಟೇ ಬಿಜೆಪಿ ಸೀಮಿತ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ
ದಾವಣಗೆರೆಬೆಂಗಳೂರು

4 ವರ್ಷ ಅಧಿಕಾರ ನಡೆಸಿದ್ರೂ ದಾವಣಗೆರೆ, ಬಾಗಲಕೋಟೆಗೆ ಕೊಡುಗೆ ನೀಡದ ಬಿಜೆಪಿ, ಅಪಪ್ರಚಾರಕ್ಕಷ್ಟೇ ಬಿಜೆಪಿ ಸೀಮಿತ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ

Share
ದಾವಣಗೆರೆ
Share

ದಾವಣಗೆರೆ: ಬಿಜೆಪಿಯವರು ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ, ದಾವಣಗೆರೆ, ಬಾಗಲಕೋಟೆಗೆ ಯಾವ ಕೊಡುಗೆಯನ್ನೂ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ದಾವಣಗೆರೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಭರ್ಜರಿ ಪ್ರಚಾರ ನಡೆಸಿದ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಅನುದಾನವನ್ನು ಜಿಲ್ಲೆಗಳಿಗೆ ನೀಡಲಿದೆ. ಬಿಜೆಪಿಯವರ ಅಪಪ್ರಚಾರದ ನಡುವೆಯೂ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಬಹುಮತವನ್ನು ಸಾಧಿಸಿತ್ತು. ಮಾಜಿ ಮುಖ್ಯಮಂತ್ರಿಗಳ ಪುತ್ರರು ನಿಂತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು ಎಂದರು.

ಮತಪಟ್ಟಿಗಳನ್ನು ವ್ಯತ್ಯಾಸಗೊಳಿಸುವ ಅಧಿಕಾರ ಕೇಂದ್ರಸರ್ಕಾರದ ಅಧೀನದಲ್ಲಿರುವ ಕೇಂದ್ರ ಚುನಾವಣಾ ಆಯೋಗಕ್ಕೆ ಸೇರಿದೆ. ಇಂತಹ ಕೃತ್ಯಗಳಲ್ಲಿ ಕಾಂಗ್ರೆಸ್ ಎಂದಿಗೂ ಒಳಗೊಂಡಿಲ್ಲ. ಹಿಂದೆ ಎಂದಿಗೂ ಇರದಿದ್ದ ವೋಟ್ ಚೋರಿಯ ವಿಷಯ, ಪ್ರಧಾನಿ ಮೋದಿಯವರ ಅವಧಿಯಲ್ಲಿ ಕೇಳಿಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿದೆ. ಜನರು ಬೆಂಬಲಿಸುವ ವಿಶ್ವಾಸವೂ ಇದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಲ್ಲಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಈ ವೇಳೆ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *