Home ಕ್ರೈಂ ನ್ಯೂಸ್ “ಪೊಲೀಸರ ಮೇಲೆ ನಿಮ್ಮ ದರ್ಪ ದೌರ್ಜನ್ಯ ಸಹಿಸಲ್ಲ”, “ಹಿಂದುತ್ವದ ವೇಷ ತೊಟ್ಟು ಪ್ರತಿಭಟನೆ ಎಂಬ ಸದಾರಮೆ ನಾಟಕ ಆಡ್ಬೇಡಿ”: ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್!
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

“ಪೊಲೀಸರ ಮೇಲೆ ನಿಮ್ಮ ದರ್ಪ ದೌರ್ಜನ್ಯ ಸಹಿಸಲ್ಲ”, “ಹಿಂದುತ್ವದ ವೇಷ ತೊಟ್ಟು ಪ್ರತಿಭಟನೆ ಎಂಬ ಸದಾರಮೆ ನಾಟಕ ಆಡ್ಬೇಡಿ”: ಪ್ರಿಯಾಂಕ್ ಖರ್ಗೆ ಖಡಕ್ ಕೌಂಟರ್!

Share
ಪ್ರಿಯಾಂಕ್ ಖರ್ಗೆ
Share

ಬೆಂಗಳೂರು: ಅಹಿತಕರ ಘಟನೆಗಳಾಗದಂತೆ ಮುಂಜಾಗ್ರತಾ ಕ್ರಮವಾಗಿ ಅನುಮತಿ ನೀಡಲಾದ ರೂಟ್ ಮ್ಯಾಪ್ ನಂತೆಯೇ ಗಣಪತಿ ಮೆರವಣಿಗೆ ಸಾಗಬೇಕು ಎಂಬ ಪೊಲೀಸರ ನಿರ್ದೇಶನವೇ ಬಿಜೆಪಿಗರಿಗೆ ಧರ್ಮ ರಾಜಕಾರಣದ ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ ಭಾವಿಸಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿಭಟನೆ ಎಂಬ ಸದಾರಮೆ ನಾಟಕ ಮಾಡಲು ಹಿಂದುತ್ವದ ವೇಷ ತೊಟ್ಟು ಮೈಸೂರಿನ ಟಿ. ನರಸೀಪುರಕ್ಕೆ ತೆರಳುತ್ತಿರುವ ವಿಪಕ್ಷ ನಾಯಕ ಆರ್. ಅಶೋತ್ ಅವರೇ, ಈ ಹಿಂದೆ ನಿಮ್ಮದೇ ಬಾಯಿಯಿಂದ ಉದುರಿದ ಅಣಿಮುತ್ತುಗಳನ್ನು ಒಮ್ಮೆ ಕೇಳಿಸಿಕೊಂಡು ಆತ್ಮವಿಮರ್ಶೆ ಮಾಡಿಕೊಳ್ಳಿ! ಎಂದು ಕಿಡಿಕಾರಿದ್ದಾರೆ.

ನಿಮ್ಮದೇ ಹೇಳಿಕೆಯಂತೆ, ನೀವೀಗ “ಧರ್ಮ ರಾಜಕಾರಣ” ಶುರು ಮಾಡಿರುವುದು ನಾಯಕ ಎನಿಸಿಕೊಳ್ಳುವುದಕ್ಕಾ ಅಥವಾ ಅಭದ್ರತೆಯಲ್ಲಿರುವ ವಿಪಕ್ಷ ನಾಯಕನ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶೋಕ್ ಅವರೇ, ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಮತ್ತು ರಾಜ್ಯದಲ್ಲಿ ಕೋಮುಸಂಘರ್ಷ ನಿಗ್ರಹಿಸುವ ವಿಷಯದಲ್ಲಿ ನಾನು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಪೊಲೀಸರ ಮೇಲೆ ನಿಮ್ಮ ದರ್ಪ ದೌರ್ಜನ್ಯಗಳನ್ನು ಸಹಿಸುವುದೂ ಇಲ್ಲ ಎಂದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles